ಬೆಂಗಳೂರಿಗೆ ಆಗಮಿಸಿದ ಬೆನ್ನಲ್ಲೆ ಕಾಂಗ್ರೆಸ್ ಟೀಕಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್.

Promotion

ಬೆಂಗಳೂರು,ಜೂನ್,16,2021(www.justkannada.in):  ನಾಯಕತ್ವ ಬದಲಾವಣೆ ಚರ್ಚೆ ತಾರಕಕ್ಕೇರಿರುವ ಬೆನ್ನಲ್ಲೇ ಸಚಿವರು ಮತ್ತು ಬಿಜೆಪಿ ಶಾಸಕರ ಜತೆ ಚರ್ಚಿಸಲು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದಾರೆ.jk

ಮೂರು ದಿನಗಳ ಭೇಟಿ ಹಿನ್ನೆಲೆಯಲ್ಲಿ ದೆಹಲಿಯಿಂದ ಬೆಂಗಳೂರಿನ  ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅರುಣ್ ಸಿಂಗ್ ಅವರಿಗೆ ರಾಜ್ಯ ಬಿಜೆಪಿ ನಾಯಕರು ಅದ್ಧೂರಿ ಸ್ವಾಗತ ಕೋರಿದರು.

ಬೆಂಗಳೂರಿಗೆ ಆಗಮಿಸುತ್ತಿದ್ದಂತೆ ಕಾಂಗ್ರೆಸ್  ಬಗ್ಗೆ ಟೀಕಿಸಿದ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಕೋವಿಡ್ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಜೀವದಾಸೆ ಬಿಟ್ಟು ಉತ್ತಮ ಕೆಲಸ ಮಾಡಿದ್ದಾರೆ. ಆದರೆ ಕಾಂಗ್ರೆಸ್ ನವರು ಮಾತ್ರ ಕೇವಲ ಆರೋಪಿಸುವುದರಲ್ಲೇ ಕಾಲ ಕಳೆಯುತ್ತಿದ್ದಾರೆ. ಇದೆಲ್ಲವನ್ನ ಜನ ನೋಡುತ್ತಿದ್ದಾರೆ ಎಂದು ಕಿಡಿಕಾರಿದರು.

ರಾಜ್ಯದಲ್ಲಿನ ರಾಜಕೀಯ ಬೆಳವಣಿಗೆ ಕುರಿತಂತೆ ಚರ್ಚಿಸಲು ಕರ್ನಾಟಕಕ್ಕೆ ಆಗಮಿಸಿದ್ದೇನೆ. ಎರಡು ದಿನ ರಾಜ್ಯದಲ್ಲಿಯೇ ಇರಲಿದ್ದೇನೆ. ರಾಜ್ಯ ರಾಜಕೀಯ ಬೆಳವಣಿಗೆ ಕುರಿತಂತೆ ಸದ್ಯಕ್ಕೆ ಈ ಕೂಡಲೇ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಇನ್ನು ಅಂತರಾಷ್ಟ್ರೀಯ ಯೋಗ ದಿನವನ್ನ ಅದ್ಧೂರಿಯಾಗಿ ಆಚರಣೆ ಮಾಡುತ್ತೇವೆ ಎಂದು ಅರುಣ್ ಸಿಂಗ್ ತಿಳಿಸಿದರು.

Key words: Arun Singh- in charge – state –BJP- criticized – Congress – Bengaluru.