ಜು,29 ರಂದು ಸಿಎಂ ಬಿಎಸ್ ವೈ ಮತ್ತು ಆರೋಗ್ಯ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಆಶಾ ಕಾರ್ಯಕರ್ತೆಯರಿಂದ ನಿರ್ಧಾರ…..

ಮೈಸೂರು,ಜು,25,2020(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜುಲೈ 29 ರಂದು ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಆರೋಗ್ಯ ಸಚಿವರ ನಿವಾಸಕ್ಕೆ ಮುತ್ತಿಗೆ ಹಾಕಲು ಆಶಾಕಾರ್ಯಕರ್ತೆಯರು ನಿರ್ಧರಿಸಿದ್ದಾರೆ.jk-logo-justkannada-logo

ಈ ಕುರಿತು ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಬೇಡಿಕೆ ಈಡೇರಿಕೆ ತಪ್ಪಿದ್ದಲ್ಲಿ ತೀವ್ರ ಹೋರಾಟ ಮಾಡುವುದಾಗಿ ಆಶಾ ಕಾರ್ಯಕರ್ತೆಯರು ಎಚ್ಚರಿಕೆ ನೀಡಿದರು.

ಇದುವರೆಗೂ ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಲ್ಲ. ಹೀಗಾಗಿ ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲು ಆಶಾ ಕಾರ್ಯಕರ್ತೆಯರು ಮುಂದಾಗಿದ್ದು, ಸರ್ಕಾರದ ಅಸಹಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುತ್ತದೆ.  ಜುಲೈ 29ರಂದು ಬೇಡಿಕೆ ಈಡೇರಿಕೆ ಆಗ್ರಹಿಸಿ ಮುಖ್ಯಮಂತ್ರಿ, ಆರೋಗ್ಯ ಸಚಿವರ ಮನೆ ಸೇರಿದಂತೆ ರಾಜ್ಯದ ಹಲವು ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಆಶಾ ಕಾರ್ಯಕರ್ತೆಯರು ತಿಳಿಸಿದ್ದಾರೆ.asha-worker-decision-besiege-cm-bs-yeddyurappa-residence-june-29

ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವಧನ ರೂ. 12000 ನೀಡಬೇಕು. ಜೊತೆಗೆ ಕೊರೊನಾ ವಾರಿಯರ್ಸ್ ಗಳಾಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು ನೀಡುವಂತೆ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಎಐಯುಟಿಯುಸಿ ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ್ ಮೇಟಿ, ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಅಧ್ಯಕ್ಷೆ ಶುಭ ಮಂಗಳ, ಕೋಮಲ, ಸುನೀತ ಉಪಸ್ಥಿತರಿದ್ದರು.

Key words: Asha worker-decision –besiege- CM BS yeddyurappa- residence -June 29