ಆಶಾ ಕಾರ್ಯಕರ್ತೆಯರ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ  ಪ್ರತಿಭಟನೆ

kannada t-shirts

ಮೈಸೂರು,ಸೆಪ್ಟೆಂಬರ್,22,2020(www.justkannada.in) : ಆಶಾ ಕಾರ್ಯಕರ್ತೆಯರಿಗೆ ಮಾಸಿಕ 12 ಸಾವಿರ ರೂ. ಹಾಗೂ ಬಾಕಿ ಪ್ರೋತ್ಸಾಹ ಧನ ನೀಡುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ಎಐಯುಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.jk-logo-justkannada-logoಮಂಗಳವಾರ  ಜಿಲ್ಲಾಧಿಕಾರಿಗಳ ಕಚೇರಿ ಬಳಿ ಜಮಾವಣೆಗೊಂಡ ಪ್ರತಿಭಟನಾಕಾರರು ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶವ್ಯಕ್ತಪಡಿಸಿದರು.

ಪಿ.ಎಸ್.ಸಂಧ್ಯಾ ಮಾತನಾಡಿ, 4 ಸಾವಿರ ರೂ. ರಾಜ್ಯ ಸರ್ಕಾರದ ನಿಶ್ಚಿತ ಗೌರವಧನ ಮತ್ತು ಕೇಂದ್ರ ಸರ್ಕಾರದಿಂದ ಚಟುವಟಿಕೆಗಳನ್ನು ಆಧರಿಸಿ 5ರಿಂದ 6ಸಾವಿರ ಪ್ರೋತ್ಸಾಹ ಧನ ನೀಡುತ್ತದೆ. ಎರಡೂ ಸೇರಿ ಸುಮಾರು 9ರಿಂದ 10 ಸಾವಿರ ಪಡೆಯುವಂತೆ ಯೋಜನೆ ಇದೆ. ಇದಕ್ಕೆ ಸರ್ಕಾರದ ಅನುದಾನವೂ ಇದೆ. ಆದರೆ ಇದುವರೆಗೆ ಸರಿಯಾಗಿ ತಲುಪುತ್ತಿಲ್ಲ ಎಂದು ದೂರಿದರು.

Asha,activists,protests,demanding,fulfillment,demand

ಈ ಹಣಕ್ಕೆ ಇನ್ನೊಂದಿಷ್ಟು ಹಣವನ್ನು ಸೇರಿಸಿ 12ಸಾವಿರ ನಿಗದಿಯಾಗಿ ಕೊಡುವುದು ಸರ್ಕಾರಕ್ಕೆ ಕಷ್ಟವಲ್ಲ. ಆದ್ದರಿಂದ ತಮ್ಮ ಪರಿಸ್ಥಿತಿ ಉತ್ತಮಪಡಿಸಿಕೊಳ್ಳಲು ಅವರು ವರ್ಷ ವರ್ಷ ಹೋರಾಟಗಳನ್ನು ನಡೆಸುತ್ತಲೇ ಬಂದಿದ್ದಾರೆ ಎಂದರು.

ಕಳೆದ ಜನವರಿ ತಿಂಗಳಲ್ಲಿ ನಡೆದ ರಾಜ್ಯಮಟ್ಟದ ಚಳವಳಿಯನ್ನು ಆರೋಗ್ಯ ಮಂತ್ರಿಗಳ ಆಶ್ವಾಸನೆಯೊಂದಿಗೆ ಹಿಂಪಡೆಯಲಾಗಿತ್ತು. ಆದರೆ, ಭರವಸೆ ಭರವಸೆಯಾಗಿಯೇ ಉಳಿಯಿತು. ನಮ್ಮ ಬೇಡಿಕಗಳನ್ನು ಈಡೇರಿಸುವುದಾಗಿ ವಚನವಿತ್ತರೂ ಏನನ್ನೂ ಘೋಷಣೆ ಮಾಡದೆ ಇರುವುದು ಬೇಸರದ ಸಂಗತಿ.

ಸರ್ಕಾರ ಸೂಕ್ತ ಕ್ರಮ ಕೈಗೊಂಡು ಆರ್ಥಿಕ ಸಂಕಷ್ಟದಲ್ಲಿ ಇರುವ ಆಶಾ ಕಾರ್ಯಕರ್ತೆಯರಿಗೆ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದಲ್ಲಿ ನಾಳೆಯಿಂದ ರಾಜ್ಯದ ಆಶಾ ಕಾರ್ಯಕರ್ತೆಯರು ಬೆಂಗಳೂರಿನಲ್ಲಿ ಹೋರಾಟ ನಡೆಸಲಿದ್ದಾರೆಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸುನೀತ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

key words : Asha-activists-protests-demanding-fulfillment-demand

 

website developers in mysore