ಪತ್ನಿ ಮೇಲೆ ಹಲ್ಲೆ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ವಿರುದ್ಧ ಎಫ್ಐಆರ್

Promotion

ಬೆಂಗಳೂರು, ಫೆಬ್ರವರಿ 05, 2023 (www.justkannada.in): ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಾಂದ್ರಾ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕುಡಿದ ಅಮಲಿನಲ್ಲಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ವಿನೋದ್ ಕಾಂಬ್ಳಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮದ್ಯದ ಅಮಲಿನಲ್ಲಿದ್ದ ಪತ್ನಿಯ ಮೇಲೆ ಕಾಂಬ್ಳಿ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಕಾಂಬ್ಳಿ ವಿರುದ್ಧ ಪತ್ನಿಯೇ ದೂರು ಸಲ್ಲಿಸಿದ್ದಾರೆ.

ಬಾಂದ್ರಾ ಪೊಲೀಸರ ಪ್ರಕಾರ ಕಾಂಬ್ಳಿ ವಿರುದ್ಧ ಐಪಿಸಿಯ ಸೆಕ್ಷನ್ 324 (ಸ್ವಯಂಪ್ರೇರಿತವಾಗಿ ಅಪಾಯಕಾರಿ ಶಸ್ತ್ರಾಸ್ತ್ರಗಳಿಂದ ಗಾಯಗೊಳಿಸುವುದು) ಮತ್ತು 504 (ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.