ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ನಿಧನಕ್ಕೆ ಗಣ್ಯರ ಕಂಬನಿ

Promotion

ಬೆಂಗಳೂರು, ಅಕ್ಟೋಬರ್ 23, 2022 (www.justkannada.in): ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ (56) ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಶನಿವಾರ ತಡರಾತ್ರಿ ನಿಧನರಾಗಿದ್ದಾರೆ.  ಆನಂದ ಮಾಮನಿ ನಿಧನಕ್ಕೆಗಣ್ಯರು ಕಂಬನಿ ಮಿಡಿದಿದ್ದಾರೆ.

ತೀವ್ರ ಅನಾರೋಒಗ್ಯದಿಂದ ಬಳಲುತ್ತಿದ್ದ ಶಾಸಕ ಆನಂದ ಮಾಮನಿ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ತಡರಾತ್ರಿ ನಿಧನರಾಗಿದ್ದಾರೆ.

ಆನಂದ ಮಾಮನಿ ನಿಧನಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ಪಕ್ಷಗಳ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.

2008 ರಲ್ಲಿ ಬಿಜೆಪಿ ಪಕ್ಷದಿಂದ ಮೊದಲ ಬಾರಿಗೆ ಸವದತ್ತಿ ಕ್ಷೇತ್ರದ ಶಾಸಕರಾಗಿ ಆಯ್ಕೆಯಾದರು. ಅವರು ಮತ್ತೆ 2013-2018 ರಲ್ಲಿ ಎರಡನೇ ಬಾರಿಗೆ ಬಿಜೆಪಿಯಿಂದ ವಿಧಾನಸಭೆಗೆ ಸ್ಪರ್ಧಿಸಿ ಜಯಗಳಿಸಿದರು. ಮತ್ತೆ 2018 ರಲ್ಲಿ ಮೂರನೇ ಬಾರಿಗೆ ಹ್ಯಾಟ್ರಿಕ್​ ವಿಜಯ ಸಾಧಿಸಿದ್ದರು.