ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ- ಮಾಜಿ ಸಿಎಂ ಹೆಚ್.ಡಿಕೆ ಟ್ವೀಟ್.

ಬೆಂಗಳೂರು,ಮೇ,13,2023(www.justkannada.in): ರಾಜ್ಯ ವಿಧಾನಸಭಾ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್ ಪಕ್ಷಕ್ಕೆ ಮತದಾರರು ತನ್ನ ಒಲವು ತೋರಿದ್ದಾರೆ. ಈ ನಡುವೆ ಜೆಡಿಎಸ್ ಈ ಬಾರಿ 19 ಸ್ಥಾನಗಳನ್ನ ಗಳಿಸಿದ್ದು ಫಲಿತಾಂಶ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದಿದ್ದಾರೆ.

ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ  ಶ್ರೀ ಹೆಚ್.ಡಿ.ದೇವೇಗೌಡರು, ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ ಎಂದು ಹೆಚ್.ಡಿಕೆ ಹೇಳಿದ್ದಾರೆ.

ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ ಎಂದು ಹೆಚ್.ಡಿ ಕುಮಾರಸ್ವಾಮಿ  ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: assembly election-result-Former CM H.D.Kumaraswamy-tweet.