ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ: ಮಾಜಿ ಸಿಎಂ ಬಿಎಸ್ವೈ ಭವಿಷ್ಯ

Promotion

ಬೆಂಗಳೂರು, ಫೆಬ್ರವರಿ 05, 2023 (www.justkannada.in): ರಾಜ್ಯದಲ್ಲಿ ಏಪ್ರಿಲ್ 10ರಿಂದ 12ರೊಳಗೆ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ಏಪ್ರಿಲ್ 10-12ರೊಳಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ ಎಂದು ಭವಿಷ್ಯ ನುಡಿದರು.

ಸರ್ಕಾರದ ಸಾಧನೆಗಳನ್ನು ಆಧಾರಿಸಿ ರಾಜ್ಯದಲ್ಲಿ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ. ಹಣ ಬಲ, ಕೋಮು ರಾಜಕಾರಣ ಬಳಸಿ ಕಾಂಗ್ರೆಸ್ ಅಧಿಕಾರಕ್ಕೆ ಬರುವ ದಿನಗಳು ಮುಗಿದು ಹೋಗಿದೆ ಎಂದರು.

ಬಿಜೆಪಿ ಸರ್ಕಾರದ ಯೋಜನೆಗಳನ್ನು ರಾಜ್ಯದ ಮೂಲೆ ಮೂಲೆಗೂ ಪ್ರತಿ ಮನೆಗೂ ತಲುಪಿಸುವ ಕಾರ್ಯವನ್ನು ಪಕ್ಷದ ಮುಖಂಡರು, ಕಾರ್ಯಕರ್ತರು ಮಾಡಲಿದ್ದಾರೆ ಎಂದು ಹೇಳಿದರು.