ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು  ಸಿಎಂ ಕಚೇರಿಯಿಂದಲೇ ಯತ್ನ- ಡಿ.ಕೆ ಶಿವಕುಮಾರ್ ಗಂಭೀರ ಆರೋಪ.

ಬೆಂಗಳೂರು,ಏಪ್ರಿಲ್,22,2023(www.justkannada.in): ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಮತ್ತು ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದನೆ ನೀಡಲು  ಸಿಎಂ ಕಚೇರಿಯಿಂದಲೇ ಯತ್ನಿಸಲಾಗುತ್ತಿದೆ. ಈ ಬಗ್ಗೆ ಚುನಾವಣಾ ಆಯೋಗ ಕ್ರಮ ಕೈಗೊಳ್ಳಬೇಕು ಎಂದು  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ಕಾಂಗ್ರೆಸ್​ ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತಗೊಳಿಸಲು ಯತ್ನ ನಡೆಯುತ್ತಿದೆ. ಸಿಎಂ ಕಚೇರಿ, ಸಿಎಂ ಲೀಗಲ್ ಟೀಂನಿಂದ ಅಧಿಕಾರ ದುರ್ಬಳಕೆ ಮಾಡಲಾಗುತ್ತಿದೆ. ನಮ್ಮ ಅಭ್ಯರ್ಥಿಗಳ ಅಫಿಡವಿಟ್​​ ಡೌನ್​ಲೋಡ್​ ಮಾಡಿಕೊಳ್ಳಲಾಗುತ್ತಿದೆ. ಖುದ್ದು ಸಿಎಂ ಕಚೇರಿಯ ಸೂಚನೆ ಮೇರೆಗೆ ಇದೆಲ್ಲ ನಡೆಯುತ್ತಿದೆ. ಇದಕ್ಕೆ ಸಿಎಂ ಬೊಮ್ಮಾಯಿಯೇ ನೇರಹೊಣೆ ಹೊರಬೇಕಾಗುತ್ತೆ. ಮುಖ್ಯಮಂತ್ರಿಗಳ ಕಚೇರಿಯ ಕಾಲ್ ಡೀಟೇಲ್ಸ್ ತೆಗೆಯಬೇಕು ಈ ಬಗ್ಗೆ ಚುನಾವಣಾ ಆಯೋಗ ಕ್ರಮಕೈಗೊಳ್ಳಬೇಕು ಎಂದು  ಆಗ್ರಹಿಸಿದ್ದಾರೆ.

ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಅರ್ಜಿಗಳಲ್ಲಿ ಸಮಸ್ಯೆ ಬಿಜೆಪಿ ಅಭ್ಯರ್ಥಿಗಳ ನಾಮಪತ್ರ ಅನುಮೋದಿಸಲು ಒತ್ತಡ ಸಿಎಂ ಕಚೇರಿಯಿಂದಲೇ ಒತ್ತಡ ಹಾಕುತ್ತಿದ್ದಾರೆ. ಯಾವುದೇ ಒತ್ತಡಕ್ಕೆ ಮಣಿಯದಂತೆ ಅಧಿಕಾರಿಗಳಿಗೆ ಚುನಾವಣಾ ಆಯೋಗ ಸೂಚಿಸಬೇಕು ಎಂದು ಒತ್ತಾಯಿಸಿದರು.

ವಿಜಯಪುರ, ಕಲ್ಯಾಣ ಕರ್ನಾಟಕ ಭಾಗದ ನಾಯಕರು ಬಿಜೆಪಿ ತೊರೆದು ಕಾಂಗ್ರೆಸ್​ ಪಕ್ಷ ಸೇರುತ್ತಿದ್ದಾರೆ. ಕಾಂಗ್ರೆಸ್​ ಪಕ್ಷದ ತತ್ವ, ಸಿದ್ಧಾಂತಗಳನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಕಷ್ಟ ಕಾಲದಲ್ಲಿ ಬಿಜೆಪಿ ಯಾವ ರೀತಿ ನಡಿಸಿಕೊಳ್ತು ಅಂತಾ ಗೊತ್ತಿದೆ. ಯಾರಾದರೂ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವ ಇಚ್ಛೆ ಇದ್ದರೇ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೇರ್ಪಡೆಯಾಗಿ. ನಮಗೆ ಶಕ್ತಿ ತುಂಬಿ. ಇವತ್ತು ಬಿಜೆಪಿಯಿಂದ ಅರವಿಂದ್ ಚೌಹಾಣ್, ಮಾಜಿ ಶಾಸಕ ವಿಶ್ವನಾಥ ಪಾಟೀಲ್ ಹೆಬ್ಬಾರ್ ಸೇರದಂತೆ ಹಲವಾರು ಜನ ಸೇರುತ್ತಿದ್ದಾರೆ ಎಂದು ಡಿಕೆ ಶಿವಕುಮಾರ್​ ಹೇಳಿದರು.

Key words:  attempt – CM’s office – reject – nomination – Congress candidates-  DK Shivakumar