ರೈತರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಸಫಲ ಆಗುವುದಿಲ್ಲ -ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ, ಜನವರಿ 26,2021(www.justkannada.in): ದೇಶದ ಬೆನ್ನೆಲುಬು ರೈತರ ಜೀವನ ಗುಣಮಟ್ಟ ಸುಧಾರಣೆಗೆ ಪ್ರಧಾನಿ ನರೇಂದ್ರ ಮೋದಿ ಕೃಷಿಯಲ್ಲಿ ಸುಧಾರಣೆ ತಂದಿದ್ದಾರೆ. ಆದರೆ ರಾಜಕೀಯ ಪ್ರೇರಿತವಾಗಿ ರೈತರನ್ನು ತಪ್ಪು ದಾರಿಗೆ ಎಳೆಯುತ್ತಿದ್ದು, ಇದು ಸಫಲ ಆಗುವುದಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.jk

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ವತಿಯಿಂದ ನಡೆದ 72 ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಡಾ.ಕೆ.ಸುಧಾಕರ್, ಪ್ರಧಾನಿ ನರೇಂದ್ರ ಮೋದಿ ಕೆಲ ಕಾನೂನುಗಳಲ್ಲಿ ಬದಲಾವಣೆ ತರುವ ಮೂಲಕ ಅಭಿವೃದ್ಧಿ ಮಾಡಿದ್ದಾರೆ. ಕಿಸಾನ್ ಸಮ್ಮಾನ್ ನಡಿ, ನೇರವಾಗಿ ಖಾತೆಗೆ ರೈತರ ಬ್ಯಾಂಕ್ ಖಾತೆಗೆ ಹಣ ಜಮೆ ಆಗುತ್ತದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ಈ ಯೋಜನೆಯಡಿ ಹಣ ನೀಡುತ್ತಿದ್ದಾರೆ. ಆದರೆ ದುರದೃಷ್ಟವೆಂಬಂತೆ ಕೆಲ ಸಂಘಟನೆ, ಮಧ್ಯವರ್ತಿ, ರಾಜಕೀಯ ಪ್ರೇರಿತವಾಗಿ ಪಕ್ಷಗಳು ರೈತರನ್ನು ತಪ್ಪು ದಾರಿಗೆ ಎಳೆಯುತ್ತಿವೆ ಎಂದರು.

ರಾಜ್ಯದಲ್ಲಿ ಕೈಗೊಂಡ ತ್ವರಿತ ಕ್ರಮಗಳಿಂದ ಕೊರೊನಾ ನಿಯಂತ್ರಣಕ್ಕೆ ಬಂದಿದೆ. ಅತಿ ಶೀಘ್ರದಲ್ಲಿ ಕೊರೊನಾ ಲಸಿಕೆ ದೊರೆತಿದ್ದು, ಬೇರೆ ದೇಶಗಳಿಗೂ ರಫ್ತು ಮಾಡಲಾಗುತ್ತಿದೆ. ಬ್ರೆಜಿಲ್ ನ ಅಧ್ಯಕ್ಷರು ಲಸಿಕೆ ನೀಡಿರುವುದಕ್ಕೆ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ. ಈ ರೀತಿ ಬೇರೆ ದೇಶಗಳೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳುವ ಕಾರ್ಯವನ್ನು ಪ್ರಧಾನಿ ಮೋದಿ ಮಾಡಿದ್ದಾರೆ. ಜಗತ್ತಿನ ಮುಂದೆ ತಲೆ ಎತ್ತಿ ನಡೆಯುವಂತೆ ಭಾರತ ಬೆಳೆದಿದೆ ಎಂದರು.

ಭಾರತದಲ್ಲಿ ಅತಿ ಹೆಚ್ಚು ಯುವಜನರಿದ್ದಾರೆ. ದೇಶದಲ್ಲಿ ಉತ್ತಮ ಮಾನವ ಸಂಪನ್ಮೂಲವಿದ್ದು, ಇದನ್ನು ಸಮರ್ಥವಾಗಿ ಬಳಸಿಕೊಳ್ಳಬೇಕು. ಮೂಲಭೂತ ಹಕ್ಕುಗಳಂತೆ, ಮೂಲಭೂತ ಕರ್ತವ್ಯಗಳಿವೆ. ಇವೆರಡೂ ಒಂದೇ ನಾಣ್ಯದ ಎರಡು ಮುಖಗಳಾಗಿದ್ದು, ನಾಗರಿಕರಾಗಿ ದೇಶವನ್ನು ಉನ್ನತಿಗೆ ಕೊಂಡೊಯ್ಯಲು ಕರ್ತವ್ಯ ಪಾಲಿಸಬೇಕು ಎಂದರು.attempts-mislead-farmers-will-not-succeed-minister-dr-k-sudhakar

ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ರಚನೆಯಾದ ಸಂವಿಧಾನ ಜಾರಿಯಾದ ದಿನವಿದು. ಕನ್ನಡಿಗ ಬೆನಗಲ್ ನರಸಿಂಗರಾಯರು ಆ ಸಮಿತಿಯಲ್ಲಿದ್ದರು. ಅಂಬೇಡ್ಕರ್ ನೀಡಿದ ಸಂವಿಧಾನ ಸಮಬಾಳು, ಸಮಪಾಲು ಎಂಬ ಚಿಂತನೆಯಿಂದ ಕೂಡಿದೆ. ಇಡೀ ವಿಶ್ವದಲ್ಲೇ ಅತ್ಯಂತ ದೊಡ್ಡದಾದ ಪ್ರಜಾಪ್ರಭುತ್ವ ದೇಶಕ್ಕೆ ಪೂರಕವಾದ ಸಂವಿಧಾನವಿದು ಎಂದರು.

ಜೈ ಇನ್ಸಾನ್

ರೈತರು, ಯೋಧರನ್ನು ಸ್ಮರಿಸಲು ಜೈ ಜವಾನ್ ಜೈ ಕಿಸಾನ್ ಎಂದು ಲಾಲ್ ಬಹಾದ್ದೂರ್ ಶಾಸ್ತ್ರಿ ಹೇಳಿದ್ದರು. ವಿಜ್ಞಾನಿಗಳನ್ನು ಸ್ಮರಿಸಲು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರು ಜೈ ವಿಜ್ಞಾನ್ ಎಂದು ಹೇಳಿದ್ದರು. ಅದೇ ರೀತಿ ಕವಿ ಕುವೆಂಪು ವಿಶ್ವಮಾನವ ಸಂದೇಶ ಸಾರಲು ಜೈ ಇನ್ಸಾನ್ ಎಂಬ ಸಂದೇಶ ಸಾರಬೇಕಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.

ಸಚಿವರು ಹೇಳಿದ ಇತರೆ ಅಂಶಗಳು

ಕೊರೊನಾ ವಿರುದ್ಧದ ಹೋರಾಟದಲ್ಲಿ ಮಾಸ್ಕ್ ಧರಿಸುವುದು, ಶುಚಿತ್ವ ಕಾಪಾಡುವುದು ಎಲ್ಲರ ಕರ್ತವ್ಯ.

ದೇಶದಲ್ಲಿ ಭದ್ರತಾ ವ್ಯವಸ್ಥೆ ಉತ್ತಮವಾಗಿದ್ದು, ಬೇರೆ ದೇಶಗಳು ಗಡಿ ವಿಚಾರದಲ್ಲಿ ಭಯ ಪಡುವಂತಾಗಿದೆ.

ಜಿಲ್ಲೆಯ 44 ಕೆರೆಗಳಿಗೆ ಸಂಸ್ಕರಿತ ನೀರು ಹರಿಸಲಾಗಿದೆ. ಮೆಡಿಕಲ್ ಕಾಲೇಜು ನಿರ್ಮಾಣ ಪ್ರಗತಿಯಲ್ಲಿದೆ.

ಶುದ್ಧ ಗಾಳಿಯಲ್ಲಿ ನಗರಕ್ಕೆ 7 ನೇ ಸ್ಥಾನ, ಉದ್ಯೋಗ ಖಾತರಿಯಲ್ಲಿ ಮಾನವ ದಿನ ಸೃಜಿಸುವಲ್ಲಿ ಜಿಲ್ಲೆಗೆ ಮೊದಲ ಸ್ಥಾನ ಸಿಕ್ಕಿದೆ.

ಮುಖ್ಯಮಂತ್ರಿಗಳು ಉತ್ತಮ ನಿರ್ಧಾರ ಕೈಗೊಂಡಿದ್ದು, ಸಂಪುಟ ಸಂಪೂರ್ಣ ಆಗಿದೆ. ನಾವೆಲ್ಲರೂ ವಿಶ್ವಾಸಕ್ಕೆ ಧಕ್ಕೆಯಾಗದಂತೆ ಜವಾಬ್ದಾರಿ ನಿರ್ವಹಿಸುತ್ತೇವೆ. ಸರ್ಕಾರ ಇನ್ನು ಮುಂದೆಯೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಲಿದೆ.

Key words: Attempts –mislead- farmers- will -not succeed-Minister -Dr. K. Sudhakar