ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಪ್ರಕರಣ: ನಾಲ್ವರು ಅಧಿಕಾರಿಗಳು ಸಸ್ಪೆಂಡ್.

Promotion

ಬೆಂಗಳೂರು,ಅಕ್ಟೋಬರ್ 11,2023(www.justkannada.in):  ನಗರದ ಅತ್ತಿಬೆಲೆಯಲ್ಲಿ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ರಾಜ್ಯ ಸರ್ಕಾರ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.

ಅತ್ತಿಬೆಲೆಯಲ್ಲಿ ಪಟಾಕಿ ಗೋಡೌನ್ ನಲ್ಲಿ ಅಗ್ನಿ ಅವಘಡ ಸಂಭವಿಸಿ 14 ಮಂದಿ ಸಾವಿಗೀಡಾಗಿದ್ದರು. ಪಟಾಕಿ ಅಂಗಡಿಗೆ 1ಸಾವಿರ ಕೆ.ಜಿ ಮಾತ್ರ ಸ್ಟಾಕ್ ಇಡಲು ಅವಕಾಶ ನೀಡಲಾಗಿತ್ತು. ಪರವಾನಿಗೆ ನೀಡುವಾಗ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆ ಪರವಾನಿಗೆ ನೀಡಿರುವ ಹಿನ್ನಲೆಯಲ್ಲಿ ಈ ಅವಘಡಕ್ಕೆ ಕಾರಣವೆಂದು 4 ಜನ ಅಧಿಕಾರಿಗಳನ್ನ ಸೇವೆಯಿಂದ ಅಮಾನತು ಮಾಡಿ ಇಲಾಖೆ ತನಿಖೆಗೆ ಆದೇಶಿಸಲಾಗಿದೆ.

Key words: Atthibele- firecracker –case-Suspension -four -officials