ವರ್ಷದ ಮೊದಲ ಗ್ರಾನ್‌ಸ್ಲಾಮ್ ಟೂರ್ನಿ: ಫೆಡರರ್ ಗೆಲುವಿನ ಆರಂಭ

Promotion

ಮೆಲ್ಬೋರ್ನ್, ಜನವರಿ 21, 2019 (www.justkannada.in): ಸ್ವಿಸ್ ಸೂಪರ್‌ಸ್ಟಾರ್ ರೋಜರ್ ಫೆಡರರ್ ಮೆಲ್ಬೋರ್ನ್ ಪಾರ್ಕ್‌ನಲ್ಲಿ ಆರಂಭವಾದ ಗ್ರಾನ್‌ಸ್ಲಾಮ್ ಟೂರ್ನಿ ಆಸ್ಟ್ರೇಲಿಯನ್ ಓಪನ್‌ನಲ್ಲಿ ಶುಭಾರಂಭ ಮಾಡಿದ್ದಾರೆ.

20 ವರ್ಷಗಳ ಹಿಂದೆ ಆಸ್ಟ್ರೇಲಿಯನ್ ಓಪನ್‌ಗೆ ಕಾಲಿಟ್ಟ ಬಳಿಕ ಈ ತನಕ ಫೆಡರರ್ ಮೊದಲ ಸುತ್ತಿನಲ್ಲಿ ಸೋತಿಲ್ಲ. ಪುರುಷರ ಸಿಂಗಲ್ಸ್‌ನ ಮೊದಲ ಸುತ್ತಿನ ಪಂದ್ಯದಲ್ಲಿ 38ರ ಹರೆಯದ ಫೆಡರರ್ ಅವರು ಸ್ಟೀವ್ ಜಾನ್ಸನ್‌ರನ್ನು 6-3, 6-2, 6-2 ಸೆಟ್‌ಗಳ ಅಂತರದಿಂದ ಮಣಿಸಿದರು.

ಈ ಮೂಲಕ 21ನೇ ಗ್ರಾನ್‌ಸ್ಲಾಮ್ ಪ್ರಶಸ್ತಿ ಗೆಲ್ಲಲು ಮೊದಲ ಹೆಜ್ಜೆ ಇಟ್ಟಿದ್ದಾರೆ. ಕೆನಡಾದ ಯುವ ಆಟಗಾರ ಡೆನಿಸ್ ಶಪೊವಾಲೊವ್ ಮೊದಲ ಸುತ್ತಿನಲ್ಲೇ ಸೋತು ನಿರಾಸೆ ಅನುಭವಿಸಿದ್ದಾರೆ.