ಗುಂಡಿ ತಪ್ಪಿಸಲು ಹೋಗಿ ಖಾಸಗಿ ಬಸ್ ಗೆ ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದುರ್ಮರಣ…

Promotion

ಬೆಂಗಳೂರು ಗ್ರಾಮಾಂತರ,ಜೂ,17,2019(www.justkannada.in):  ಗುಂಡಿ ತಪ್ಪಿಸಲು ಹೋಗಿ ಆಟೋ ಖಾಸಗಿ ಬಸ್ ಗೆ ಡಿಕ್ಕಿಯಾದ ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಶ್ವನಾಥಪುರದಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ ನಾಲ್ವರಿಗೆ ಗಾಯವಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಗುಂಡಿ ತಪ್ಪಿಸಲು ಹೋಗಿ ಆಟೋ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿಯಾಗಿ ಈ ಭೀಕರ ಅಪಘಾತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ಈ ಕುರಿತು ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Auto collision to private bus. Four  death in a fatal accident

#Auto #collision #privatebus #death  #fatalaccident