ಪ್ರತಿ ಜಿಲ್ಲೆಯಲ್ಲೂ ಸ್ವಯಂಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥ ನಿರ್ಮಿಸುವ ಉದ್ದೇಶವಿದೆ- ಮೈಸೂರಿನಲ್ಲಿ ಡಿಸಿಎಂ ಲಕ್ಷ್ಮಣ್ ಸವದಿ ಹೇಳಿಕೆ…

Promotion

ಮೈಸೂರು,ಜ,24,2020(www.justkannada.in): ಮುಂದಿನ 3 ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ಈ ರೀತಿ ಸ್ವಯಂಚಾಲಿತ ಚಾಲನಾ ಪರೀಕ್ಷಾ ಪಥವನ್ನು ನಿರ್ಮಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಹೇಳಿದರು.

ಮೈಸೂರಿನಲ್ಲಿ ಸ್ವಯಂಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥವನ್ನ ಡಿಸಿಎಂ ಲಕ್ಷ್ಮಣ್ ಸವದಿ  ಉದ್ಘಾಟಿಸಿದರು. ಸಾಂಕೇತಿಕವಾಗಿ ನಾಮಫಲಕ ಅನಾವರಣ ಮಾಡುವ ಮೂಲಕ ಸ್ವಯಂಚಾಲಿತ ವಿದ್ಯುನ್ಮಾನ ಚಾಲನಾ ಪರೀಕ್ಷಾ ಪಥವನ್ನ  ಲೋಕಾರ್ಪಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ನಾಗೇಂದ್ರ, ಸಂದೇಶ್ ನಾಗರಾಜ್ ಸೇರಿದಂತೆ ಸಾರಿಗೆ ಇಲಾಖೆಯ ಹಿರಿಯ ಅಧಿಕಾರಿಗಳ ಉಪಸ್ಥಿತರಿದ್ದರು.

ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಡಿಸಿಎಂ ಲಕ್ಷ್ಮಣ್ ಸವದಿ,  ವಿಶೇಷವಾಗಿ ಮೈಸೂರು ಅಂದರೆ ಸ್ವಚ್ಛ ಹಾಗೂ ಸುಂದರ ನಗರ ಹಾಗಾಗಿ ರಾಜ್ಯದಲ್ಲಿ ಆದ್ಯತೆ ಮೇರೆಗೆ ಮೈಸೂರಿನಲ್ಲಿ ಇಂತಹ ಸ್ವಯಂಚಾಲಿತ ವ್ಯವಸ್ಥೆಯನ್ನು ಜಾರಿಗೆ ತಂದಿದ್ದೇವೆ.  ಅಂಕಿ ಅಂಶಗಳ ಪ್ರಕಾರ ರಾಜ್ಯದಲ್ಲಿ 1.5 ಲಕ್ಷ ಜನರು ಪ್ರತೀ ವರ್ಷ ರಸ್ತೆ ಅಪಘಾತದಿಂದ ಮೃತಪಡುತ್ತಿದ್ದಾರೆ. 6 ಲಕ್ಷ ಜನರು ಗಾಯಾಳುಗಳಾಗುತ್ತಿದ್ದಾರೆ ಚಾಲಕರಿಗೆ ಉತ್ತಮ ಚಾಲನಾ ತರಬೇತಿ ನೀಡುವುದರ ಮೂಲಕ ಅಪಘಾತ ಸಂಖ್ಯೆಗಳನ್ನು ಕಡಿಮೆ ಮಾಡಬಹುದು ಎಂದು ತಿಳಿಸಿದರು.

ಹಾಗೆಯೇ ಮುಂದಿನ ಮೂರು ವರ್ಷಗಳಲ್ಲಿ ಪ್ರತಿ ಜಿಲ್ಲೆಯಲ್ಲೂ ಈ ರೀತಿ ಸ್ವಯಂ ಚಾಲಿತ ಚಾಲನಾ ಪರೀಕ್ಷಾ ಪಥವನ್ನ ನಿರ್ಮಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದು ಡಿಸಿಎಂ ಲಕ್ಷ್ಮಣ್  ಹೇಳಿದರು.

Key words: automated -electronic driving -test – district –mysore-DCM Laxman Sawadi