ಕೊರೋನಾ ಬಗ್ಗೆ ಮೈಸೂರಿನಲ್ಲಿ ಪೊಲೀಸರಿಂದ ವಿಭಿನ್ನ ರೀತಿ ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ…

ಮೈಸೂರು,ನವೆಂಬರ್,9,2020(www.justkannada.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ಹರಡದಂತೆ ತಡೆಗಟ್ಟಲು ಮಾಸ್ಕ್ ಕಡ್ಡಾಯ, ಸಾಮಾಜಿಕ ಅಂತರ ಪಾಲನೆ ನಿಯಮಗಳನ್ನ ಜಾರಿಗೊಳಿಸಿದೆ. ಕೊರೋನಾ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅವಶ್ಯಕವಾಗಿದೆ.

ಹೀಗಾಗಿ ಕೋವಿಡ್ -19 ಕುರಿತು ಮೈಸೂರಿನ ಕೆ,ಆರ್ ಪುರಂ ಠಾಣಾ ಪೊಲೀಸರು ಸಾರ್ವಜನಿಕರಿಗೆ ವಿಭಿನ್ನ ರೀತಿಯಲ್ಲಿ ಅರಿವು ಕಾರ್ಯಕ್ರಮ ಕೈಗೊಂಡಿದ್ದಾರೆ.

ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀನಿವಾಸ್ ಹಾಗೂ ಸಿಬ್ಬಂದಿಗಳು  ನಗರದ ಪ್ರಮುಖ ವೃತ್ತಗಳಲ್ಲಿ ಫ್ಲೆಕ್ಸ್ ಅಳವಡಿಸಿ, ಸಾರ್ವಜನಿಕರಿಗೆ ಕರಪತ್ರ ಹಂಚುವ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿದ್ದಾರೆ. ನಗರದ ಅಗ್ರಹಾರ ವೃತ್ತ, ಗನ್ ಹೌಸ್ ವೃತ್ತ, ನಂಜುಮಳಿಗೆ ವೃತ್ತ, ಚಾಮುಂಡಿಪುರಂ ಮತ್ತು ಚಾಮುಂಡಿಬೆಟ್ಟದಲ್ಲಿ  ಸಾರ್ವಜನಿಕರಿಗೆ ಅರಿವು ಕಾರ್ಯಕ್ರಮ ಕೈಗೊಂಡಿದ್ದಾರೆ.awareness-corona-mysore-police

ನಿಮ್ಮ ಹಾಗೂ ಕುಟುಂಬದವರ ಸುರಕ್ಷತೆಗಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಸಾಂಕ್ರಾಮಿಕ ರೋಗವನ್ನು ಹರಡರಂತೆ ಮುನ್ನೆಚ್ಚರಿಕೆ ವಹಿಸುವಂತೆ ಸಾರ್ವಜನಿಕರಿಗೆ ಪೊಲೀಸರ ಕಿವಿಮಾತು ಹೇಳುತ್ತಿದ್ದಾರೆ.

Keywords: Awareness –Corona- Mysore-police