ಕಸ ಸಂಗ್ರಹಣಾ ವಾಹನ ಚಲಾಯಿಸುವ ಮೂಲಕ ಜಾಗೃತಿ ಮೂಡಿಸಿದ ಸಚಿವ ಬಿ. ಶ್ರೀರಾಮುಲು. 

ಚಿತ್ರದುರ್ಗ. ಅಕ್ಟೋಬರ್ 11,2021(www.justkannada.in):  ಮೊಳಕಾಲ್ಮೂರಿನಲ್ಲಿಂದು  ಕಸಸಂಗ್ರಹಣಾ ವಾಹನಗಳಿಗೆ  ಸ್ವಯಂ ವಾಹನ ಚಲಾಯಿಸುವ ಮೂಲಕ ಚಾಲನೆ ನೀಡಿದ  ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ ಬಿ. ಶ್ರೀರಾಮುಲು, ಸಾರ್ವಜನಿಕರು  ಸ್ಚಚ್ಚತೆಯನ್ನು ಮೈಗೂಡಿಸಿಕೊಂಡು ಸ್ವಚ್ಚ, ಸುಂದರ ಹಾಗೂ ಆರೋಗ್ಯಯುಕ್ತ  ಸಮಾಜ  ನಿರ್ಮಾಣಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿ, ಜಾಗೃತಿ ಮೂಡಿಸಿದರು.

ಮೊಳಕಾಲ್ಮೂರಿನಲ್ಲಿಂದು ಪಟ್ಟಣ ಪಂಚಾಯಿತಿ ಆಯೋಜಿಸಿದ್ದ ಕಸಸಂಗ್ರಹಣಾ ವಾಹನಗಳಿಗೆ ಚಾಲನೆ  ನೀಡಿ ಮಾತನಾಡಿದ ಅವರು, ಸ್ಚಚ್ಚ ಭಾರತ ಸ್ವಾಥ್ಯ ಭಾರತವಾಗಿದೆ. ಮಹಾತ್ಮ ಗಾಂಧಿಜಿಯವರ  ಆಶಯವೂ ಇದಾಗಿತ್ತು. ಮಹಾತ್ಮ ಗಾಂಧಿಜಿ ಅವರ ಆಶಯವನ್ನು ಪ್ರಧಾನ ಮಂತ್ರಿ  ನರೇಂದ್ರ ಮೋದಿ ಅವರು ಸಾಕಾರಗೊಳಿಸಿದ್ದಾರೆ. ಮಕ್ಕಳಲ್ಲಿ ಸ್ವಚ್ಚತೆ ಕುರಿತು ಜಾಗೃತಿ ಮೂಡಿಸಬೇಕು.  ಸಾರ್ವಜನಿಕರು ಸ್ವಚ್ಚತೆಯನ್ನು ಮೈಗೂಡಿಸಿಕೊಂಡು ತಮ್ಮ ಮನೆ, ಪರಿಸರವನ್ನು  ಸ್ವಚ್ಚವಾಗಿಟ್ಟುಕೊಳ್ಳಬೇಕು‌. ಕಡ್ಡಾಯವಾಗಿ ಕಸವನ್ನು ಬೇರ್ಪಡಿಸಿ ಕಸಸಂಗ್ರಹಣಾ ವಾಹನಗಳಿಗೆ ನೀಡಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕಡ್ಡಾಯವಾಗಿ  ಶೌಚಾಯಗಳನ್ನು ಬಳಕೆ ಮಾಡಬೇಕು. ಸ್ಚಚ್ಚತೆ ಕಾಪಾಡಲು  ಸರ್ಕಾರವು ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದೆ. ಸಾರ್ವಜನಿಕರು ಸಹಕರಿಸಿ, ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಚಿವ ಶ್ರೀರಾಮುಲು ಮನವಿ ಮಾಡಿದರು.

ನಂತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ,  ಇಸ್ಕಾನ್ ಸಂಸ್ಥೆಯ ವತಿಯಿಂದ ಪೌರಕಾರ್ಮಿಕರಿಗೆ ಆಹಾರ ಕಿಟ್ ಗಳನ್ನು ವಿತರಿಸಿದರು. ಸಂದರ್ಭದಲ್ಲಿ ವಿವಿಧ ಜನಪ್ರತಿನಿಧಿಗಳು, ಮುಖಂಡರು, ಅಧಿಕಾರಿಗಳು ಉಪಸ್ಥಿತರಿದ್ದರು.

Key words: Awareness – garbage -collection -Minister -B. Sriramulu