ಕೊರೋನಾ ಬಗ್ಗೆ ಹಳ್ಳಿಗಳಲ್ಲಿ ಹೆಚ್ಚಿನ ಜಾಗೃತಿ ಮೂಡಿಸಿ-ಅಧಿಕಾರಿಗಳಿಗೆ ಸಚಿವ ಕೆ.ಎಸ್ ಈಶ್ವರಪ್ಪ ಸೂಚನೆ…

ದಾವಣಗೆರೆ,ಮಾ,21,2020(www.justkannada.in):  ಮಹಾಮಾರಿ ಕೊರೋನಾ ವೈರಸ್ ಬಗ್ಗೆ ಅನೇಕ ಹಳ್ಳಿಗಳಲ್ಲಿ ಗೊತ್ತಿಲ್ಲ. ಹೀಗಾಗಿ ಹಳ್ಳಿಗಳಲ್ಲಿ ಕೊರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಿ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ದಾವಣಗೆರೆಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್ ಈಶ್ವರಪ್ಪ,  ಜನರಲ್ಲ ಕೊರೋನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ವಿಶೇಷ ಪ್ರಯತ್ನವಾಗಿ ಜನತಾ ಕರ್ಫ್ಯೂಗೆ ಕರೆ ನೀಡಿದ್ದಾರೆ. ಈ ಜನತಾ ಕರ್ಫ್ಯೂಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ಸೇರಿ ಹಲವರು ಬೆಂಬಲಿಸಿದ್ದಾರೆ.  ಕೊರೋನಾ ವೈರಸ್ 2ನೇ ಹಂತ ದಾಟಬಾರದು. ಹೀಗಾಗಿ ಎಲ್ಲರೂ ಜಾಗೃತಿ ವಹಿಸಿ ಎಂದು ಕರೆ ನೀಡಿದರು.

ಹಾಗೆಯೇ ದೇವಸ್ಥಾನ, ಮಸೀದಿಗಳು ಇತಿಹಾಸದಲ್ಲೇ ಇದೇ ಮೊದಲ ಬಾರಿ ಬಂದ್ ಆಗಿವೆ. ಅನೇಕ ಹಳ್ಳಿಗಳಲ್ಲಿ ಕೊರೋನಾ ವೈರಸ್ ಬಗ್ಗೆ ತಿಳುವಳಿಕೆ ಇಲ್ಲ. ಹೀಗಾಗಿ ಹಳ್ಳಿಗಳಲ್ಲಿ ಕೊರೋನಾ ಬಗ್ಗೆ ಜಾಗೃತಿ ಮೂಡಿಸಿ ಎಂದು ಸಚಿವ ಕೆ.ಎಸ್ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.

Key words: awareness – villages- about –Corona virus-Minister- KS Eshwarappa