ಶಿಕ್ಷಣ ಇಲಾಖೆಯಿಂದ ಡಾ.ಬಿ.ಆರ್ ಅಂಬೇಡ್ಕರ್ ಗೆ ಅಪಮಾನ ಆರೋಪ: ಸಚಿವ ಸುರೇಶ್ ಕುಮಾರ್ ವಿರುದ್ದ ಮೈಸೂರಿನಲ್ಲಿ ಪ್ರತಿಭಟನೆ…

kannada t-shirts

ಮೈಸೂರು,ನ,15,2019(www.justkannada.in): ಸಂವಿಧಾನ ದಿನಾಚರಣೆಯ ಸುತ್ತೋಲೆಯಲ್ಲಿ ಅಂಬೇಡ್ಕರ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ  ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ  ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು.

ಪ್ರಗತಿಪರ ಸಂಘಟನೆಗಳು  ನಗರದ ಟೌನ್ ಹಾಲ್ ಬಳಿ ಪ್ರತಿಭಟನೆ ನಡೆಸಿ ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ದ ಆಕ್ರೋಶ ವ್ಯಕ್ತಪಡಿಸಿತು. ಶಿಕ್ಷಣ ಇಲಾಖೆ ದುರುದ್ದೇಶದಿಂದಲೇ ಈ ರೀತಿ ಮಾಡಿದೆ. ಬಿಜೆಪಿ ಸರ್ಕಾರ ಪ್ರತಿ ಭಾರಿ ಅಂಬೇಡ್ಕರ್ ಗೆ ಅಪಮಾನ  ಮಾಡುತ್ತಿದೆ. ಕೂಡಲೇ ಅಂಬೇಡ್ಕರ್ ಬಗ್ಗೆ ಅಧಿಸೂಚನೆ ಪ್ರಕಟಿಸಿರುವ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ  ನೀಡಬೇಕು ಎಂದು ಪ್ರತಿಭಟನೆಯಲ್ಲಿ ಮಾಜಿ ಮೇಯರ್ ಪುರುಶೋತ್ತಮ್ ಒತ್ತಾಯಿಸಿದರು.

ಶಿಕ್ಷಣ ಇಲಾಖೆ ಹೊರಡಿಸಿದ್ದ ಸಂವಿಧಾನ ದಿನಾಚರಣೆಯ ಸುತ್ತೋಲೆಯಲ್ಲಿ  ಅಂಬೇಡ್ಕರ್ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂದು  ಬರೆಯಲಾಗಿತ್ತು. ಈ ಕುರಿತು ಬಾರಿ ವಿವಾದ ಉಂಟಾಗಿ ಶಿಕ್ಷಣ ಇಲಾಖೆ ವಿರುದ್ದ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

Key words: Baba Saheb Ambedkar – insult -education department-Protest-Mysore

 

website developers in mysore