ಬಾಬ್ರಿ ಮಸೀದಿ ಧ್ವಂಸ ಕೇಸ್ : ಎಲ್.ಕೆ ಅಡ್ವಾಣಿ ಸೇರಿ ಎಲ್ಲಾ ಆರೋಪಿಗಳು ನಿರ್ದೋಷಿಗಳು –ಕೋರ್ಟ್ ನಿಂದ ಮಹತ್ವದ ತೀರ್ಪು ಪ್ರಕಟ…

ಲಖನೌ,ಸೆಪ್ಟಂಬರ್,30,2020(www.justkannada.in): ದೇಶದಲ್ಲಿ ಬಾರಿ ಕುತೂಹಲಕ್ಕೆ  ಕಾರಣವಾಗಿದ್ದ 1992ರಲ್ಲಿ ನಡೆದ ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಬಿಐ ವಿಶೇಷ ನ್ಯಾಯಾಲಯ ಅಂತಿಮ ತೀರ್ಪು ಪ್ರಕಟಿಸಿದೆ.jk-logo-justkannada-logo

ಪ್ರಕರಣದ ಎಲ್ಲಾ 32 ಆರೋಪಿಗಳನ್ನು ಖುಲಾಸೆಗೊಳಿಸಿ ಲಖನೌ ಸಿಬಿಐ  ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕ ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ ಜೋಷಿ, ಉಮಾಭಾರತಿ ಮತ್ತು ಕಲ್ಯಾಣ್ ಸಿಂಗ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.babri-masjid-wreck-case-all-accused-clean-chit-judgment

ಲಕ್ನೋದ ಸಿಸಿಬಿ ವಿಶೇಷ ಕೋರ್ಟ್ ನ್ಯಾಯಾಧೀಶ ಎಸ್.ಕೆ. ಯಾದವ್ ನೇತೃತ್ವದ ನ್ಯಾಯಾಪೀಠವು ತೀರ್ಪು ಪ್ರಕಟಿಸಿದ್ದು, ಪ್ರಕರಣದಲ್ಲಿ ಬಿಜೆಪಿ‌‌ ನಾಯಕರು  ನಿರ್ದೋಷಿಗಳು ಎಂದು ತೀರ್ಪು ನೀಡಿದೆ. ಬಾಬ್ರಿ ಧ್ವಂಸ ಪೂರ್ವ ನಿಯೋಜಿತವಲ್ಲ. ಇದೊಂದು ಆಕಸ್ಮಿಕ ಘಟನೆ ಅಷ್ಟೇ. ಆರೋಪಿಗಳ ವಿರುದ್ಧ ಯಾವುದೇ ಪ್ರಬಲ ಸಾಕ್ಷಿಗಳಿಲ್ಲ ಎನ್ನುವ ಮೂಲಕ ನ್ಯಾಯಾಲಯ ಪ್ರಕರಣ ಪೂರ್ವ ನಿಯೋಜಿತ ಎನ್ನುವ ವಾದ ತಳ್ಳಿ ಹಾಕಿದೆ.

ಪ್ರಕರಣ ಸಂಬಂಧ 3,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆಯಾಗಿತ್ತು. ಪ್ರಕರಣದ ಬಗ್ಗೆ ಕಳೆದ 17 ವರ್ಷಳಿಂದ  ತನಿಖೆ ನಡೆಯುತ್ತಿತ್ತು.

Key words: Babri Masjid –wreck- case- All -accused – Clean Chit-judgment