ಅಂತರಾಷ್ಟ್ರೀಯ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ : ಕಿವಿ ಮಾತು ಹೇಳಿದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್

Promotion

ಮೈಸೂರು,ಅಕ್ಟೋಬರ್,23,2020(www.justkannada.in) :  ಮೈಸೂರು ವಿವಿಯು ಮೌಲ್ಯಯುತ, ಗುಣಮಟ್ಟದ ಶಿಕ್ಷಣವನ್ನು ನೀಡಿದ್ದು, ಅದನ್ನು ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಅಭಿವೃದ್ಧಿಯ ದೃಷ್ಠಿಯಿಂದ ಸದುಪಯೋಗಪಡಿಸಿಕೊಳ್ಳಿ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿಹೇಮಂತ್ ಕುಮಾರ್ ಸಲಹೆ ನೀಡಿದರು.Bachelor's-Degree-International-Students-Chancellor Prof.G Hemant Kumar-said

ಅಂತರರಾಷ್ಟ್ರೀಯ ವಿದ್ಯಾರ್ಥಿ ಸಂಘಗಳ ಒಕ್ಕೂಟದ ವತಿಯಿಂದ ನಗರದ ಬೆಳವಾಡಿ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದ 14ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಪ್ರೊ.ಜಿ.ಹೇಮಂತ್ ಕುಮಾರ್ ಮಾತನಾಡಿದರು.

ಮೈಸೂರು ವಿವಿ ವ್ಯಾಪ್ತಿಯ ವಿವಿಧ ಕಾಲೇಜಿನಲ್ಲಿ 89 ಅಂತರಾಷ್ಟ್ರೀಯ ವಿದ್ಯಾರ್ಥಿಗಳು ಪದವಿ ಪಡೆದುಕೊಂಡಿರುವುದು ಸಂತೋಷದ ವಿಷಯ. 100 ವರ್ಷಗಳ ಇತಿಹಾಸವನ್ನು ಹೊಂದಿರುವ ಮೈಸೂರು ವಿವಿಯು ಗುಣಮಟ್ಟದ ಶಿಕ್ಷಣವನ್ನು ಒದಗಿಸಿದೆ ಎಂದರು.

Bachelor's-Degree-International-Students-Chancellor Prof.G Hemant Kumar-said

ವಿವಿಯಲ್ಲಿ ಕಲಿತ ಶಿಸ್ತು, ಜ್ಞಾನದಿಂದ ಉತ್ತಮ ಉದ್ಯೋಗ ಪಡೆದು ದೇಶದ ಕೀರ್ತಿಯನ್ನು ಹೆಚ್ಚಿಸಬೇಕು. ಒಳ್ಳೆಯ ರೀತಿಯಲ್ಲಿ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ದೇಶದ 89 ಮಂದಿಗೆ ಪದವಿ ಪ್ರದಾನ ಮಾಡಲಾಯಿತು.

Bachelor's-Degree-International-Students-Chancellor Prof.G Hemant Kumar-said

ಕಾರ್ಯಕ್ರಮದಲ್ಲಿ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಕೆ.ಮಹಾದೇವನ್, ಅಂತರರಾಷ್ಟ್ರೀಯ ವಿದ್ಯಾರ್ಥಿ ಸಂಘಗಳ ಒಕ್ಕೂಟದ ನಿರ್ದೇಶಕ ಜನಾರ್ಧನ್, ಐಸಿಸಿಆರ್ ಪ್ರಾದೇಶಿಕ ನಿರ್ದೇಶಕ ವೇಣುಗೋಪಾಲ್ ಇತರರು ಇದ್ದರು.

key words : Bachelor’s-Degree-International-Students-Chancellor Prof.G Hemant Kumar-said