ಬಾದಾಮಿ ಕ್ಷೇತ್ರದ ಮತದಾರರಿಗೆ ಮಾಜಿ ಸಿಎಂ ಸಿದ್ಧರಾಮಯ್ಯರಿಂದ ದ್ರೋಹ- ಕೆ.ಎಸ್ ಈಶ್ವರಪ್ಪ ವಾಗ್ದಾಳಿ

Promotion

ಶಿವಮೊಗ್ಗ,ಜನವರಿ,28,2023(www.justkannada.in): ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಮಾಜಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕ್ಷೇತ್ರ ಬದಲಾಯಿಸುವ ಮೂಲಕ ಬಾದಾಮಿ ಮತದಾರರಿಗೆ ದ್ರೋಹ ಬಗೆಯುತ್ತಿದ್ದಾರೆ ಎಂದು ಕಿಡಿಕಾರಿದರು.

ಈ ಕುರಿತು ಇಂದು ಮಾತನಾಡಿದ ಕೆ.ಎಸ್ ಈಶ್ವರಪ್ಪ, ಬಾದಾಮಿ ದೂರವಾಗುವ ಕಾರಣಕ್ಕೆ ಕೋಲಾರದಿಂದ ಸ್ಪರ್ಧಿಸುತ್ತಿರುವುದಾಗಿ ಸಿದ್ದರಾಮಯ್ಯ ಹೇಳುತ್ತಾರೆ, ಹಾಗಾದರೆ ಅವರು 6 ಬಾರಿ ಆಯ್ಕೆಯಾಗಿರುವ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಲಿ. ಅವರಿಗೆ ಸೋಲುವ ಭೀತಿ ಕಾಡುತ್ತಿದೆ, ಎರಡು ಕ್ಷೇತ್ರಗಳಲ್ಲ 10 ಕ್ಷೇತ್ರಗಳಲ್ಲಿ ಸ್ಪರ್ಧಿಸಿದರೂ ಅವರು ಎಲ್ಲ ಕಡೆ ಸೋಲುವುದು ಖಚಿತ  ಎಂದು ನುಡಿದರು.

Key words: Badami -constituency’s-voters -betrayed – Siddaramaiah – KS Eshwarappa