ದೆಹಲಿಗೆ ಹೋಗಿ ಬಂದ್ರೂ ಪರಿಹಾರ ತರಲಿಲ್ಲ ಅಂದ್ರೆ ಏನು ಪ್ರಯೋಜನ..?-ಸಿಎಂ ಬಿಎಸ್ ವೈ ವಿರುದ್ದ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬಾಗಲಕೋಟೆ,ಆ,21,2019(www.justkannada.in): ರಾಜ್ಯದಲ್ಲಿ ನೆರೆ ಪರಿಸ್ಥಿತಿ ಉಂಟಾಗಿ 15 ದಿನಗಳು ಕಳೆದರೂ ರಾಜ್ಯಕ್ಕೆ ಒಂದೇ ಒಂದು  ಪೈಸೆ ಪರಿಹಾರ ಬಂದಿಲ್ಲ. ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಹೋಗಿ ಬಂದ್ರೂ ಪರಿಹಾರ ತರಲಿಲ್ಲ ಅಂದ್ರೆ ಏನು ಪ್ರಯೋಜನ..? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಬಾಗಲಕೋಟೆ ಬಾದಾಮಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ನೆರೆ ಪ್ರದೇಶಗಳ ನಿರ್ವಹಣೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಫಲವಾಗಿವೆ. ರಾಜ್ಯದಲ್ಲಿ ಪ್ರವಾಹದಿಂದ ಸಾಕಷ್ಟು ನಷ್ಟ ಉಂಟಾಗಿದೆ. 15 ದಿನಗಳು ಕಳೆದರೂ ಪ್ರಧಾನಿ ಮೋದಿ ಪರಿಹಾರ ಘೋಷಿಸಿಲ್ಲ ಎಂದು ಕಿಡಿಕಾರಿದರು.

ಕೇಂದ್ರ ಸರ್ಕಾರ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಸುತ್ತಿದೆ. ರಾಜ್ಯಕ್ಕೆ ನೆರೆಪರಿಹಾರವಾಗಿ ಒಂದೇ ಒಂದು ರೂಪಾಯಿ ಪರಿಹಾರ ಕೊಟ್ಟಿಲ್ಲ. ಇದು ತಾರತಮ್ಯ ಮಾಡಿದಂತಾಗಿದೆ. ಇದು ಬಿಜೆಪಿ ಸರ್ಕಾರದ ವೈಪಲ್ಯ. ಅಮಿತ್ ಶಾ ಮತ್ತು ನಿರ್ಮಲಾ ಸೀತಾರಾಮನ್ ಅವರು ಕಾಟಾಚಾರಕ್ಕೆ  ವೀಕ್ಷಣೆ ಮಾಡಿದ್ದೇಕೆ ಎಂದು ಸಿದ್ದರಾಮಯ್ಯ  ಗುಡುಗಿದರು.

Key words:  bagalkote- former cm-siddaramaiah- outrage-central government- Flood Relief Fund