ಪರಿಸರ ಸ್ನೇಹಿ ನಗರವಾಗಿ ಬೆಂಗಳೂರು… ರಾಜಧಾನಿಯಲ್ಲಿ 136 ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್

Promotion

ಬೆಂಗಳೂರು, ಸೆಪ್ಟೆಂಬರ್ 10, 2021 (www.justkannada.in): ಬೆಂಗಳೂರಿನಲ್ಲಿ 136 ಕಡೆ ವಿದ್ಯುತ್ ರೀ ಚಾರ್ಜಿಂಗ್ ಸೆಂಟರ್ ಆರಂಭವಾಗುತ್ತಿದೆ. ಮುಂದಿನ ದಿನಗಳಲ್ಲಿ 500ಕ್ಕೂ ಹೆಚ್ಚು ಸೆಂಟರ್ ನಿರ್ಮಾಣವಾಗಲಿದೆ ಎಂದು ಇಂಧನ ಸಚಿವ ಸುನಿಲ್‌ಕುಮಾರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಸಂಬಂಧ ಮಾಹಿತಿ ನೀಡಿರುವ ಅವರು, ವಿದ್ಯುತ್ ಚಾಲಿತ ವಾಹನಗಳಿಗೆ ಹೆಚ್ಚು ಪ್ರೋತ್ಸಾಹ ನೀಡಲಿದ್ದೇವೆ ಎಂದು ಇಂಧನ ಸಚಿವ ಸುನಿಲ್‌ಕುಮಾರ್ ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಹೆಚ್ಚಾಗಲಿದ್ದು, ಭವಿಷ್ಯದಲ್ಲಿ ಇದು ಅನಿವಾರ್ಯವಾಗಲಿದೆ. ಹೀಗಾಗಿ ರೀ ಚಾರ್ಜಿಂಗ್​ ಸೆಂಟರ್​ ಸ್ಥಾಪಿಸಲು ಹೆಚ್ಚು ಒತ್ತು ನೀಡಲಿದ್ದೇವೆ ಎಂದು ತಿಳಿಸಿದ್ದಾರೆ.

key words: Bangalore as an eco-friendly city … 136 power recharging center in the capital city