ಮೌನ ಪ್ರತಿಭಟನೆ ಹಿಂಪಡೆದ ಬೆಂಗಳೂರು ಬಂಟರ ಸಂಘ : ಸೂಕ್ತ ಸ್ಥಾನ ಮಾನ ನೀಡುವುದಾಗಿ ನಳೀನ್ ಕುಮಾರ್ ಭರವಸೆ.

ಬೆಂಗಳೂರು, ಆ.23, 2019 : (www.justkannada.in news) ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವ ಸಂಪುಟದಲ್ಲಿ ಕರಾವಳಿ ಭಾಗದ ಬಂಟ ಸಮುದಾಯದ ಶಾಸಕರನ್ನು ಕಡೆಗಣಿಸಲಾಗಿದೆ. ಈ ಬಗ್ಗೆ ಬೆಂಗಳೂರು ಬಂಟರ ಸಂಘ ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ರಾಜ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರ ಮನವಿಯಂತೆ ಹಿಂಪಡೆದುಕೊಳ್ಳಲಾಗಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಪ್ರಬಲ ಸಮುದಾಯವಾಗಿರುವ ಬಂಟ ಸಮುದಾಯದಿಂದ ಐವರು ಶಾಸಕರು ಆಯ್ಕೆಯಾಗಿದ್ದರು. ಅದ್ರೆ ಯಾರಿಗೂ ಕೂಡ ಬಿಎಸ್‍ವೈ ಸಚಿವ ಸಂಪುಟದಲ್ಲಿ ಮಂತ್ರಿ ಪದವಿ ಸಿಕ್ಕಿರಲಿಲ್ಲ. ಹೀಗಾಗಿ ಬೆಂಗಳೂರು ಬಂಟರ ಸಂಘವು ಇಂದು ನಗರದ ಫ್ರೀಡಂ ಪಾರ್ಕ್‍ನಲ್ಲಿ ಮೌನ ಪ್ರತಿಭಟನೆಗೆ ಮುಂದಾಗಿತ್ತು.
ಆದ್ರೆ ಮಂಗಳೂರು ಲೋಕ ಸಭಾ ಸಂಸದ ಹಾಗೂ ನೂತನ ಬಿಜೆಪಿಯ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು, ಮುಂಬರುವ ದಿನಗಳಲ್ಲಿ ಕರಾವಳಿ ಭಾಗದ ಶಾಸಕರಿಗೆ ಸೂಕ್ತ ಸ್ಥಾನಮಾನಗಳನ್ನು ನೀಡಲಾಗುವುದು ಎಂಬ ಭರವಸೆಯನ್ನು ನೀಡಿದ್ದಾರೆ. ಆದ್ರಿಂದ ಮೌನ ಪ್ರತಿಭಟನೆಯನ್ನು ಹಿಂಪಡೆದುಕೊಳ್ಳಲಾಗಿದೆ ಎಂದು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಉಪೇಂದ್ರ ಶೆಟ್ಟಿ ತಿಳಿಸಿದ್ದಾರೆ.

key words : bangalore-bjp-bunts association-protest-withdrawn-nalin kumar kateel