ರಾಜ್ಯ ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ….

Bangalore- BJP office- entry - Restriction
Promotion

ಬೆಂಗಳೂರು,ಜೂ,6,2020(www.justkannada.in):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ತೀವ್ರಗತಿಯಲ್ಲಿ ಏರುತ್ತಿರುವ ಹಿನ್ನೆಲೆ, ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ.Bangalore- BJP office- entry - Restriction

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಪ್ರವೇಶಕ್ಕೆ ನಿಷೇಧ ವಿಧಿಸಲಾಗಿದೆ. ರಾಜ್ಯ ಬಿಜೆಪಿ ಸಂಸದರು, ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರವೇಶಿಸಲು ನಿರ್ಬಂಧ ಹೇರಲಾಗಿದೆ. ಕೊರೋನಾ ಭೀತಿ ಮುಂದಿಟ್ಟುಕೊಂಡು ಬಿಜೆಪಿ ಈ ನಿರ್ಧಾರ ಕೈಗೊಂಡಿದೆ. ಹೀಗಾಗಿ ಯಾರೂ ಬಿಜೆಪಿ ಕಚೇರಿ ಪ್ರವೇಶಿಸುವಂತಿಲ್ಲ.

ಇಂದು ಪ್ರವೇಶಕ್ಕೆ ನಿರ್ಬಂಧ ಹೇರಿದ ಬಗ್ಗೆ ಬಿಜೆಪಿ ಘೋಷಣೆ ಮಾಡಿದೆ.  ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಇಂದು ಬಿಜೆಪಿ ಕೋರ್ ಕಮಿಟಿ ಸಭೆ ಇದೆ.

Key words: Bangalore- BJP office- entry – Restriction