ಬೆಂಗಳೂರು ಬಿಜೆಪಿ ಭದ್ರಕೋಟೆ: ನಾವೇ ಗೆಲ್ಲುತ್ತೇವೆ- ಸಚಿವ ಆರ್.ಅಶೋಕ್ ವಿಶ್ವಾಸ.

Promotion

ಬೆಂಗಳೂರು,ಮೇ,20,2022(www.justkannada.in): ಬೆಂಗಳೂರು ಬಿಜೆಪಿಯ ಭದ್ರಕೋಟೆಯಾಗಿದೆ. ಹೀಗಾಗಿ ಬಿಬಿಎಂಪಿ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಕಂದಾಯ ಸಚಿವ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು.

8 ವಾರಗಳೊಳಗೆ ಬಿಬಿಎಂಪಿ ಚುನಾವಣೆ ಪ್ರಕ್ರಿಯೆ ಆರಂಭಿಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಆರ್.ಅಶೋಕ್, ಸುಪ್ರೀಂಕೋರ್ಟ್ ಆದೇಶವನ್ನ ಸ್ವಾಗತಿಸುತ್ತೇವೆ. ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧವಿದೆ. ಈಗಾಗಲೇ ನಾವು ವಾರ್ಡ್ ವಾರು ಸಭೆಗಳನ್ನ ನಡೆಸಿದ್ದೇವೆ.

ಬೆಂಗಳೂರು ಬಿಜೆಪಿಯ ಭದ್ರಕೋಟೆ. ಹೀಗಾಗಿ ನಾವೇ ಗೆಲ್ಲುತ್ತೇವೆ.ಬಿಜೆಪಿಯೇ ಗೆಲುವು ಸಾಧಿಸಲಿದೆ ಎಂದು ಆರ್.ಅಶೋಕ್ ನುಡಿದರು.

Key words: Bangalore-BJP- win –bbmp-election-Minister-R. Ashok