ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೆಂಗಳೂರು, ಕಲ್ಬುರ್ಗಿಯಲ್ಲಿ ಹೆಚ್ಚಾದ ಆಕ್ರೋಶ:  ಪ್ರತಿಭಟನಾಕಾರರು ಪೊಲೀಸರ ವಶಕ್ಕೆ…

ಬೆಂಗಳೂರು/ಕಲ್ಬುರ್ಗಿ,ಡಿ,19,2019(www.justkannada.in):  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ರಾಜ್ಯರಾಜಧಾನಿ ಬೆಂಗಳೂರು ಮತ್ತು ಕಲ್ಬುರ್ಗಿಯಲ್ಲಿ ಪ್ರತಿಭಟನಾ ಕಿಚ್ಚು ಹೆಚ್ಚಾಗಿದ್ದು ನಿಷೇಧಾಜ್ಞೆ ಉಲ್ಲಂಘಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆ ನಿಷೇಧಾಜ್ಞೆ ಜಾರಿ ಮಾಡಲಾಗಿದ್ದು, 144 ಸೆಕ್ಷನ್ ಜಾರಿಯಾಗಿದ್ದರೂ ಬೆಂಗಳೂರು ಕಲ್ಬುರ್ಗಿಯಲ್ಲಿ  ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದರು. ಈ ನಡುವೆ ಬೆಂಗಳೂರಿನ ಟೌನ್ ಹಾಲ್ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಟೌನ್ ಹಾಲ್ ಮುಂಭಾಗ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಹಾಗೆಯೇ ನಿಷೇಧಾಜ್ಞೆ ಉಲ್ಲಂಘಿಸಿ ಕಲ್ಬುರ್ಗಿಯ ನಗರೇಶ್ವರ ಶಾಲೆ ಮುಂದೆ  ಬೈಕ್ ರ್ಯಾಲಿ ಪ್ರತಿಭಟನೆ ನಡೆಸಲಾಗುತ್ತಿತ್ತು. ಪ್ರತಿಭಟನೆ ನಡೆಸುತ್ತಿದ್ದವರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ನಿಷೇಧಾಜ್ಞೆ ನಡುವೆಯೂ ಹಾಸನದ ಹೇಮಾವತಿ ಪ್ರತಿಮೆ ಬಳಿ ಪ್ರತಿಭಟನೆ ನಡೆಯುತ್ತಿದೆ.

Key words: Bangalore-kalburgi-protest- Oppose – Citizenship Amendment Act.