ರೌಡಿ ಶೀಟರ್ ಗಳ ಮೇಲೆ ಗುಂಡಿನ ದಾಳಿ; ಇಬ್ಬರು ಕೊಲೆ ಆರೋಪಿಗಳ ಬಂಧನ

Promotion

ಬೆಂಗಳೂರು:ಜೂ-28:(www.justkannada.in) ಕೊಲೆ ಆರೋಪಿಗಳು ತಪ್ಪಿಸಿಕೊಳ್ಳಲು ಯತ್ನಿಸಿದಾಗ ಅವರ ಮೇಲೆ ಗುಂಡುಹಾರಿಸಿ ಇಬ್ಬರನ್ನೂ ಅರ್ಕಾವತಿ ಲೇ ಔಟ್ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಆದರೆ ಮೂವರು ಆರೋಪಿಗಳು ಪರಾರಿಯಾಗಿದ್ದಾರೆ.

ರೌಡಿಶೀಟರ್​ಗಳಾದ ವಾಸೀಂ ಹಾಗೂ ಫಯಾಜ್​​​​ ಬಂಧಿತರು. ಕೆ.ಜಿ ಹಳ್ಳಿ ರೈಲ್ವೆ ಹಳಿ ಬಳಿ ಶಾಹಿದ್​​ ಎಂಬುವವರನ್ನು ಕೊಲೆ ಮಾಡಿ ಈ ಇಬ್ಬರೂ ಪರಾರಿಯಾಗುತ್ತಿದ್ದರು. ಈ ವೇಳೆ ಆರೋಪಿಗಳ ಮೆಲೆ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ.

ದುಡ್ಡಿನ ವಿಚಾರವಾಗಿ ಶಾಹಿದ್​​ನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿತ್ತು. ಖಚಿತ ಮಾಹಿತಿ ಆಧಿರಿಸಿ ಆರೋಪಿಗಳನ್ನು ಬಂಧಿಸಲು ಪೊಲೀಸರು ಸ್ಥಳಕ್ಕೆ ತೆರಳಿದ್ದಾರೆ. ಈ ವೇಳೆ ಆರೋಪಿಗಳು ಪೊಲೀಸರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ. ಪೊಲೀಸರು ಆತ್ಮ ರಕ್ಷಣೆಗಾಗಿ ಎರಡು ಸುತ್ತು ಗುಂಡು ಹಾರಿಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಘಟನೆಯಲ್ಲಿ ಪೊಲೀಸ್​​ ಪೇದೆ ಸಿದ್ದಲಿಂಗಯ್ಯ ಎಂಬುವವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪಿಸಿಕೊಂಡಿರುವ ಉಳಿದ ಮೂವರು ಆರೋಪಿಗಳಿಗಾಗಿ ಬಲೆ ಬಿಸಲಾಗಿದೆ.

ರೌಡಿ ಶೀಟರ್ ಗಳ ಮೇಲೆ ಗುಂಡಿನ ದಾಳಿ; ಇಬ್ಬರು ಕೊಲೆ ಆರೋಪಿಗಳ ಬಂಧನ
Bangalore, police fireing,rowdy sheeters,two arrested