ಕೋವಿಡ್ ಹೆಚ್ಚಿರುವ ಜಿಲ್ಲೆಗಳ ಟಾಪ್ 10ರ ಪಟ್ಟಿಯಲ್ಲಿ ಬೆಂಗಳೂರಿಗೆ 5ನೇ ಸ್ಥಾನ…

Promotion

ನವದೆಹಲಿ,11,2021(www.justkannada.in): ಸಕ್ರಿಯ ಕೋವಿಡ್ ಪ್ರಕರಣ ಹೆಚ್ಚಿರುವ ಜಿಲ್ಲೆಗಳ ಟಾಪ್ 10  ಪಟ್ಟಿಯಲ್ಲಿ ಬೆಂಗಳೂರಿಗೆ 5ನೇ ಸ್ಥಾನವಿದೆ.jk

ಈ ಕುರಿತು ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ಮಾಹಿತಿ ನೀಡಿದ್ದಾರೆ. ಅತಿಹೆಚ್ಚು ಸಕ್ರಿಯ ಕೋವಿಡ್ ಕೇಸ್ ಗಳಿರುವ ಟಾಪ್ ಜಿಲ್ಲೆಗಳ ಪಟ್ಟಿಯಲ್ಲಿ ಬೆಂಗಳೂರು ನಗರ 5ನೇ ಸ್ಥಾನದಲ್ಲಿದೆ. ಬೆಂಗಳೂರಿನಲ್ಲಿ 5,526 ಸಕ್ರಿಯ ಪ್ರಕರಣಗಳಿವೆ. ಇನ್ನು 10 ಜಿಲ್ಲೆಗಳ ಪಟ್ಟಿಯಲ್ಲಿ ಮಹಾರಾಷ್ಟ್ರದ 8 ಜಿಲ್ಲೆಗಳೇ ಇವೆ ಎಂದು ತಿಳಿಸಿದ್ದಾರೆ.Bangalore -ranked -5th –top 10 –list-covid

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ  ಮಾರ್ಚ್‌ 15 ರಿಂದ 21 ತನಕ ನಾಗ್ಪುರ ಜಿಲ್ಲೆಯಲ್ಲಿ ಲಾಕ್ ಡೌನ್ ಗೆ ನಿರ್ಧರಿಸಲಾಗಿದೆ. ಈ ಲಾಕ್‌ಡೌನ್‌ ಅವಧಿಯಲ್ಲಿ ಖಾಸಗಿ ಕಚೇರಿಗಳು ಸಂಪೂರ್ಣವಾಗಿ ಮುಚ್ಚಿರಲಿವೆ. ಸರ್ಕಾರಿ ಕಚೇರಿಗಳು ಶೇಕಡ 25ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯ ನಿರ್ವಹಿಸಲಿವೆ. ಅಗತ್ಯ ವಸ್ತುಗಳ ಅಂಗಡಿಗಳು ತೆರದಿರಲಿವೆ.

 

Key words: Bangalore -ranked -5th –top 10 –list-covid