ಬೆಂಗಳೂರು ಗಲಭೆ ಕಾಂಗ್ರೆಸ್ ಬೆತ್ತಲಾಗಿದೆ : ಬಿ.ವೈ.ವಿಜಯೇಂದ್ರ ಟೀಕೆ

Promotion

ಬೆಂಗಳೂರು, ಆಗಸ್ಟ್, 23, 2020(www.justkannada.in) : ಬೆಂಗಳೂರು ಗಲಭೆ ಸಂಬಂಧಿಸಿದಂತೆ ಕಾಂಗ್ರೆಸ್ ಬೆತ್ತಲಾಗಿದ್ದು, ಕೈ ನಾಯಕರ ಹೇಳಿಕೆಯು ಹತಾಶೆಯಿಂದ ಕೂಡಿದೆ. ಹೀಗಾಗಿ, ನಗಬೇಕೊ, ಅಳಬೇಕೊ ಗೊತ್ತಾಗುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಜೆ.ವಿಜಯೇಂದ್ರ ಟೀಕಿಸಿದ್ದಾರೆ.

Bangalore-riot-congress –naked-vijayendra-diatribe

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನನ್ನ ಫೋನ್ ಟ್ಯಾಪಿಂಗ್ ಮಾಡಲಾಗುತ್ತಿದೆ ಎಂಬ ಹೇಳಿಕೆ ಸಂಬಂಧಿಸಿದಂತೆ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್  ಬೆತ್ತಲಾಗಿದೆ. ಹೀಗಾಗಿ, ಹತಾಶೆ ಹೇಳಿಕೆ ನೀಡುತ್ತಿದೆ. ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾಂಗ್ರೆಸ್ ವರ್ತಿಸಬೇಕಿದೆ ಎಂದು ವ್ಯಂಗ್ಯವಾಗಿ ಹೇಳಿದ್ದಾರೆ.

Key words : Bangalore-riot-congress –naked-vijayendra-diatribe