ಬೆಂಗಳೂರು ಈಗ ಗುಂಡಿಗಳೂರು, ಅಧ್ವಾನ ನಗರ: ಪರ್ಸೆಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ- ಮಾಜಿ ಸಿಎಂ ಹೆಚ್.ಡಿಕೆ ಕಿಡಿ.

ಬೆಂಗಳೂರು,ಅಕ್ಟೋಬರ್,19,2022(www.justkannada.in):  ನಾಡಪ್ರಭು ಶ್ರೀ ಕೆಂಪೇಗೌಡರು ಕಟ್ಟಿದ ವಿಶ್ವಮಾನ್ಯ ನಗರ ಬೆಂಗಳೂರಿಗೆ ಪಿಂಚಣಿದಾರರೂರು, ಉದ್ಯಾನ ನಗರ, ಸಿಲಿಕಾನ್ ವ್ಯಾಲಿ ಎಂದೆಲ್ಲ ಹೆಸರುಗಳಿದ್ದವು. ಈಗ ಅವು ಗುಂಡಿಗಳೂರು, ಅಧ್ವಾನ ನಗರ, ಗುಂಡಿಗಳ ವ್ಯಾಲಿ ಎಂದಾಗಿದೆ. ಕಾಮಗಾರಿಗಳಲ್ಲಿ ಪರ್ಸಂಟೇಜ್ ವ್ಯವಸ್ಥೆಯೇ ಇಂಥ ಕುಖ್ಯಾತಿಗೆ ಕಾರಣ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ನಗರದ ಲುಲೂ ಮಾಲ್ ಎದುರಿನ ರಸ್ತೆಯಲ್ಲಿ ಗುಂಡಿಗೆ ಇನ್ನೊಂದು ಜೀವ ಬಲಿಯಾದ ಮೇಲೆ ಎಚ್ಚೆತ್ತುಕೊಳ್ಳುವ ನಾಟಕ ನಡೆದಿದೆ. ಶಾಶ್ವತ ಪರಿಹಾರ ಎಲ್ಲಿ? ಬೆಂಗಳೂರಿನಲ್ಲಿ ಕೊಲೆಪಾತಕ ಗುಂಡಿಕೂಪಗಳು ಸರಣಿ ಸಾವುಗಳಿಗೆ ಕಾರಣವಾಗಿದ್ದರೆ, ಅದೇ ಗುಂಡಿಗಳು ಕೆಲವರಿಗೆ ಕಲ್ಪವೃಕ್ಷವಾಗಿವೆ ಎಂದು ಟೀಕಿಸಿದ್ದಾರೆ.

ರಾಜ್ಯ ಬಿಜೆಪಿ ಸರಕಾರಕ್ಕೆ ರಸ್ತೆ ಗುಂಡಿಗಳು ಎಂದರೆ ಬಲು ಇಷ್ಟ. ಗುಂಡಿಗಳು ಬಿದ್ದಷ್ಟೂ ಕಿಸೆಗೆ ಹರಿದು ಬರಲಿದೆ ದುಡ್ಡು. ಇವರಿಗೆ ಹೈಕೋರ್ಟ್ ಛೀಮಾರಿ ಹಾಕಿದರೂ ನಾಚಿಕೆ, ಸಂಕೋಚ ಎನ್ನವುದಿಲ್ಲ. ಜೈಲಿಗೆ ಅಟ್ಟುವುದಾಗಿ ಎಚ್ಚರಿಕೆ ಕೊಟ್ಟರೂ ಅಧಿಕಾರಿಗಳು ಭಂಡತನ ಬಿಡುತ್ತಿಲ್ಲ.

ಗುಂಡಿ ಬಿದ್ದ ರಸ್ತೆಗಳು ರಾಜ್ಯದ ಗೌರವವನ್ನು ಮೂರಾಬಟ್ಟೆ ಮಾಡುತ್ತಿರುವುದು ಒಂದೆಡೆ, ಇನ್ನೊಂದೆಡೆ ಸರಕಾರ ಜಾಗತಿಕ ಹೂಡಿಕೆದಾರರ ಸಮಾವೇಶ, ಜಾಗತಿಕ ತಂತ್ರಜ್ಞಾನ ಶೃಂಗ ನಡೆಸುತ್ತಿದೆ. ‘ ರಸ್ತೆ ಗುಂಡಿಗಳ ಶೃಂಗ’ (Potholes Summit) ವನ್ನೂ ನಡೆಸಿದರೆ ಇನ್ನೂ ಚೆನ್ನಾಗಿರುತ್ತದೆ.

ರಸ್ತೆ ಗುಂಡಿಗಳ ಸರಣಿ ಸಾವುಗಳಿಗೆ ರಾಜ್ಯ ಬಿಜೆಪಿ ಸರಕಾರವೇ ನೇರ ಕಾರಣ. ಮುಗ್ಧ ಜನರು ಸಾವು ನೋವುಗಳಿಗೆ ಬಿಬಿಎಂಪಿಯೇ ಸಂಪೂರ್ಣ ಹೊಣೆ. ಸಂಬಂಧಪಟ್ಟ ಮಂತ್ರಿಗಳು, ಅಧಿಕಾರಿಗಳೇ ಇದಕ್ಕೆ ಉತ್ತರದಾಯಿಗಳು ಎಂದು ಹೆಚ್.ಡಿಕೆ ಸರ್ಕಾರಕ್ಕೆ ಚಾಟಿ ಬೀಸಿದ್ದಾರೆ.

ಪಾಲಿಕೆ ಮಾಡಿದ ಪಾಪಕ್ಕೆ ನತದೃಷ್ಟ ಮಹಿಳೆ ಉಮಾದೇವಿ ಅವರು ಬಲಿಯಾಗಿದ್ದಾರೆ. ಅವರಿಗೆ ಪರಿಹಾರ ಕೊಟ್ಟು ಕೈತೊಳೆದುಕೊಳ್ಳುವುದಲ್ಲ. ಇನ್ನಾದರೂ ಗುಂಡಿಗಳನ್ನು ಮುಚ್ಚಬೇಕು ಹಾಗೂ ರಸ್ತೆಗಳನ್ನು ವೈಜ್ಞಾನಿಕವಾಗಿ ನಿರ್ವಹಣೆ ಮಾಡಬೇಕು ಎಂದು ಹೆಚ್.ಡಿಕೆ ಆಗ್ರಹಿಸಿದ್ದಾರೆ.

ಮೃತ ಮಹಿಳೆ ಶ್ರೀಮತಿ ಉಮಾದೇವಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಕ್ಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ರಾಜ್ಯ ಸರಕಾರ ಅವರಿಗೆ ಸುಕ್ತ ಪರಿಹಾರ ಬಿಡುಗಡೆ ಮಾಡಬೇಕು ಎಂಬುದು ನನ್ನ ಒತ್ತಾಯ ಎಂದು ಹೆಚ್.ಡಿಕೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.

Key words: Bangalore- Road pothole-former CM-HD kumaraswamy

ENGLISH SUMMARY…

Bengaluru is not a city of potholes, worst city: Percentage system is the reason for this – Former CM HDK
Bengaluru, October 19, 2022 (www.justkannada.in): “The world-renowned Bengaluru which was once known as the ‘Garden City,’ ‘Pensioners Paradise,’ ‘Silicon Valley,’ etc., is today known as ‘Pothole City,’ ‘Worst City.’ Wide spread corruption, percentage calculation are the main reasons for the present situation,” observed former Chief Minister H.D. Kumaraswamy.
In a series of tweets, the former CM criticized the State Government for the innumerable potholes on Bengaluru roads. “The State Govt. is playing a dram of setting right everything, after yet another death occurred in the city yesterday on the road opposite to the Lulu Mall in the city. Where is the permanent relief? While the deadly potholes are taking toll of the public, it has become a boon for some others,” he said sarcastically.
“The State Government is very fond of potholes. They earn money as the number of potholes increases. They are not bothering even after the High Court has lambasted them. They are shameless. The officers have become so adamant, they are not budging even if they are warned of imprisonment,” his tweet read.
Continuing, in another tweet, he has condoled the death of Smt. Umadevi who died in the accident and has demanded the government to provide compensation immediately.
Keywords: Former CM H.D. Kumaraswamy/ city of potholes/ worst city