ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟೀಕೆ..

Promotion

ಹಾಸನ,ಜೂನ್,22,2022(www.justkannada.in):  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಠ್ಯ ಪರಿಷ್ಕರಣೆ ಬಗ್ಗೆ ಹೆಚ್.ಡಿ ದೇವೇಗೌಡರು ಪತ್ರ ಬರೆದಿದ್ದರು. ಈ ಬಗ್ಗೆ  ಸಭೆ ನಡೆಸುವುದಾಗಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಎಲ್ಲವೂ  ಕೇಶವಕೃಪಾದಲ್ಲಿ ತೀರ್ಮಾನವಾಗುತ್ತದೆ. ಬೊಮ್ಮಾಯಿ ರಿಮೋಟ್ ಕಂಟ್ರೋಲ್ ಸಿಎಂ.  ಅವರನ್ನ ನೋಡಿದರೇ ನನಗೆ ಕನಿಕರ ಬರುತ್ತೆ ಎಂದು ಟೀಖಿಸಿದರು.

ಈ ಹಿಂದೆ ಕಾಂಗ್ರೆಸ್ –ಜೆಡಿಎಸ್ ಮೈತ್ರಿ ಸರ್ಕಾರದ ವೇಳೆ ರಾಜ್ಯಕ್ಕೆ ಆಗಮಿಸಿದ್ಧ ಪ್ರಧಾನಿ ನರೇಂದ್ರ ಮೋದಿ ಅಂದು ಕರ್ನಾಟಕದ ಮುಖ್ಯಮಂತ್ರಿಯಾಗಿದ್ಧ ಹೆಚ್.ಡಿ ಕುಮಾರಸ್ವಾಮಿ ಅವರನ್ನ ರಿಮೋಟ್ ಕಂಟ್ರೋಲ್ ಸಿಎಂ ಎಂದು ಲೇವಡಿ ಮಾಡಿದ್ದರು.

Key words: Basavaraja Bommai-Remote Control-CM-Former CM -HD Kumaraswamy