ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣ ವಚನ ಸ್ವೀಕಾರ.

ಬೆಂಗಳೂರು,ಜುಲೈ,28,2021(www.justkannada.in):   ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕಾರ ಮಾಡಿದರು.jk

ರಾಜಭವನದಲ್ಲಿ ನಡೆದ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಬಸವರಾಜ ಬೊಮ್ಮಾಯಿ ರಾಜ್ಯದ 30ನೇ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ನೂತನ ಸಿಎಂಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರತಿಜ್ಞಾವಿಧಿ ಬೋಧಿಸಿದರು.  ನೂತನ ಸಿಎಂ ಬಸವರಾಜ ಬೊಮ್ಮಾಯಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೂಗುಚ್ಛ ನೀಡಿ ಶುಭ ಕೋರಿದರು.

ಕಾರ್ಯಕ್ರಮದಲ್ಲಿ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಆರ್.ಅಶೋಕ್, ಡಿಸಿಎಂ ಗೋವಿಂದ ಕಾರಜೋಳ ಸೇರಿ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

ENGLISH SUMMARY…

Basavaraj Bommai sworn in as the new Chief Minister of Karnataka
Bengaluru, July 28,2021 (www.justkannada.in): Basavaraj Bommai took charge as the new Chief Minister of Karnataka today.
He took the oath as the 30th Chief Minister of Karnataka at the swearing-in ceremony held at Raj Bhavan. He took the oath in the name of god. New Governor Thawarchand Gehlot gave him the oath and wished him by offering a flower boquet.
Former Chief Minister B.S. Yediyurappa, former Minister R.Ashok, DCM Govind Karajola and other dignitaries were present.
Keywords: Basavaraj Bommai/ New Chief Minister/ Karnataka/ unanimous/ sworn in

Key words: Basavaraja Bommai- sworn – new Chief Minister – state