ನಾಳೆ ವಿಡಿಯೋ ಕಾನ್ಫರೆನ್ಸ್ ಮೂಲಕ ಬಿಬಿಎಂಪಿ ಬಜೆಟ್ ಮಂಡನೆ

Promotion

ಬೆಂಗಳೂರು, ಏಪ್ರಿಲ್ 19, 2020 (www.justkannada.in): ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) 2020-21ನೇ ಸಾಲಿನ ಆಯವ್ಯಯವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಮಂಡಿಸಲು ಪೂರ್ವ ಸಿದ್ಧತೆ ಆರಂಭಿಸಿದೆ.

ಕೋವಿಡ್-19 ಹಿನ್ನೆಲೆಯಲ್ಲಿ ಸರ್ಕಾರ ನಿರ್ದೇಶನದಂತೆ ಏ.20 ರಂದು ವೀಡಿಯೋ ಕಾನ್ಪರೆನ್ಸ್ ಮೂಲಕ ಮಂಡಿಸುತ್ತಿದ್ದು, ಪಾಲಿಕೆ ಸದಸ್ಯರುಗಳಿಗೆ ಆಯಾ ವಲಯಗಳ ಮಟ್ಟದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಸಭೆ ಸೇರಲು ಸೂಚಿಸಲಾಗಿದೆ.

ಈ ಸಂಬಂಧ ಇಂದು ಮಹಾಪೌರರಾದ ಗೌತಮ್ ಕುಮಾರ್ ಪಾಲಿಕೆ ಕೇಂದ್ರ ಕಛೇರಿ ಕೆಂಪೇಗೌಡ ಪೌರ ಸಭಾಂಗಣಕ್ಕೆ ಭೇಟಿ ನೀಡಿ ಪೂರ್ವ ಸಿದ್ಧತೆಯನ್ನು ಪರಿಶೀಲಿಸಿದರು. ನಂತರ, ಎಲ್ಲಾ 8 ವಲಯಗಳ ಜಂಟಿ ಆಯುಕ್ತರ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿ ವ್ಯವಸ್ಥಿತವಾಗಿ ಸಿದ್ದತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದರು.