ನಾಳಿನ ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್….

Promotion

ಬೆಂಗಳೂರು,ಜು,4,2020(www.justkannada.in):  ಕೊರೋನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆ ವಿಕೆಂಡ್ ಭಾನುವಾರ ಲಾಕ್ ಡೌನ್ ಗೆ ರಾಜ್ಯ ಸರ್ಕಾರ ನಿರ್ಧರಿಸಿದ್ದು ಈ ಹಿನ್ನೆಲೆ ನಾಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡದಂತೆ ಬಿಬಿಎಂಪಿ ಆಯುಕ್ತ ಎಚ್ಚರಿಕೆ ನೀಡಿದ್ದಾರೆ.

ನಾಳಿನ ಭಾನುವಾರದ ಲಾಕ್ ಡೌನ್ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್, ಇಂದು ಸಂಜೆ 8 ಗಂಟೆಯಿಂದ  ಸೋಮವಾರ ಬೆಳಿಗ್ಗೆ 5 ಗಂಟೆವರೆಗೆ ಲಾಕ್ ಡೌನ್ ಇರುತ್ತದೆ. ಈ ವೇಳೆ ಅಗತ್ಯ ವಸ್ತುಗಳ ಮಾರಾಟಕ್ಕೆ ಮಾತ್ರ ಅವಕಾಶವಿರುತ್ತದೆ. ದಿನಸಿ, ಹಣ್ಣು, ತರಕಾರಿ ಮಾಂಸದಂಗಡಿ, ಔಷಧಿ ಮಳಿಗೆಗಳಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಆದರೆ ಸಾರ್ವಜನಿಕರು ಅನಗತ್ಯವಾಗಿ ಓಡಾಡಿದರೇ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.bbmp-commissioner-anil-kumar-informed-tomorrow-lockdown

ರಾಜ್ಯದಲ್ಲಿ ಕೊರೋನಾ ಸೋಂಕು ಹಬ್ಬುತ್ತಿರುವ ಹಿನ್ನೆಲೆ ಪ್ರತಿ ಭಾನುವಾರ ಲಾಕ್ ಡೌನ್ ಮತ್ತು ಸೋಮವಾರದಿಂದ ಶನಿವಾರವರೆಗೆ ರಾತ್ರಿ 8 ಗಂಟೆಯಿಂದ ಬೆಳಿಗ್ಗೆ 5 ಗಂಟೆವರೆಗೆ ಕರ್ಫ್ಯೂ ಹೇರಲಾಗಿದೆ.

Key words: BBMP Commissioner -Anil Kumar- informed – tomorrow- lockdown.