ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟಿದ್ದು ಯಾರು? ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಕ್ಲಾಸ್.

Promotion

ಬೆಂಗಳೂರು,ಜೂನ್,5,2023(www.justkannada.in): ಅಪಾರ್ಟ್​​ಮೆಂಟ್​ ಮಾಲೀಕರಿಗೆ ಅನುಕೂಲವಾಗಲು ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ ಆರೋಪ ಸಂಬಂಧ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ತರಾಟೆ ತೆಗೆದುಕೊಂಡರು.

ಇಂದು ನಡೆದ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್,  ಇದರಲ್ಲಿ ಭಾಗಿಯಾಗಿರುವ ಅಧಿಕಾರಿಗಳನ್ನು ಇಂದು ಸಂಜೆಯೊಳಗಡೆ ಅಮಾನತು ಮಾಡುವಂತೆ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್​ಗೆ ಸೂಚಿಸಿದರು.ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿ ಡಿಕೆ ಶಿವಕುಮಾರ್,   ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಐಡಿಯಾ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕೆ ಯೋಜನೆ ಮಾಡಿದ್ದೀರಿ, ಯಾರ ಅನುಕೂಲಕ್ಕೆ ಮಾಡಿದ್ದೀರಿ? ಯಾರು ಭಾಗಿಯಾಗಿದ್ದೀರಿ ಎಂದು ಪ್ರಶ್ನಿಸಿದರು. ಡಿಕೆ ಶಿವಕುಮಾರ್ ಪ್ರಶ್ನೆಗೆ ಉತ್ತರಿಸಲು ಅಧಿಕಾರಿಗಳು ತಡಬಡಾಯಿಸಿದರು.

ಇನ್ನು ಈಜಿಪುರ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳಿಸಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್​​ ಅವರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ನೀಡಿದರು. ಇದೇ ವೇಳೆ ಬೆಂಗಳೂರು ಬಗ್ಗೆ ದೂರದೃಷ್ಟಿ ಯೋಜನೆ ರೂಪಿಸದಿರುವ ಬಗ್ಗೆ ಬೇಸರ ವ್ಯಕ್ತಪಡಿಸಿದ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರಿನ ಕೆಲವೆಡೆ ಹೋರ್ಡಿಂಗ್ಸ್ ಇವೆ, ಅನುಮತಿ ಕೊಟ್ಟಿದ್ಯಾರು? ಒಂದೊಂದು ಪ್ರದೇಶಕ್ಕೆ ಒಂದೊಂದು ನೀತಿ ಹೇಗೆ? ಎಲ್ಲೆಡೆ ಅನ್ವಯ ಆಗುವಂತೆ ಸಾಮಾನ್ಯ ನೀತಿ ರೂಪಿಸುವಂತೆ ಸೂಚನೆ ನೀಡಿದರು.

Key words: bbmp-officer-building -road – middle – lake-DCM DK Shivakumar -Class