ಬಿಡಿಎ ಹೌಸಿಂಗ್ ಭ್ರಷ್ಟಾಚಾರ ಪ್ರಕರಣ: ಮಾಜಿ ಸಿಎಂ ಬಿಎಸ್ ವೈಗೆ ತಾತ್ಕಾಲಿಕ ರಿಲೀಫ್.

ನವದೆಹಲಿ,ಅಕ್ಟೋಬರ್,31,2022(www.justkannada.in): ಬಿಡಿಎ ಹೌಸಿಂಗ್ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧದ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನು ಸುಪ್ರೀಂ ಕೋರ್ಟ್ ವಿಸ್ತರಿಸಿದೆ. ಈ ಮೂಲಕ ಬಿಎಸ್​ ವೈಗೆ ತಾತ್ಕಾಲಿಕ  ರಿಲೀಫ್  ಸಿಕ್ಕಿದೆ.

ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಸಮ್ಮತಿ ಸೂಚಿಸಿದ್ಧ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಮಾಜಿ ಸಿಎಂ ಬಿಎಸ್ ವೈ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ್ಧ ಸುಪ್ರೀಂಕೋರ್ಟ್ ತನಿಖೆಗೆ ತಡೆಯಾಜ್ಞೆ ನೀಡಿತ್ತು.

ಇದೀಗ  ಸುಪ್ರೀಂಕೋರ್ಟ್ ಚಂದ್ರಚೂಡ ಅವರ ನೇತೃತ್ವದ ಪೀಠ ತಡೆಯಾಜ್ಞೆಯನ್ನ ವಿಸ್ತರಿಸಿದೆ. ಬಿಎಸ್ ವೈ ಸಿಎಂ ಆಗಿದ್ಧ ವೇಳೆ ಬಿಡಿಎಗೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಂ ಕೋರ್ಟ್ ನಲ್ಲಿ ಖಾಸಗಿ ದೂರು ದಾಖಲಿಸಿದ್ದರು.

Key words:  BDA-housing-corruption-case- Temporary relief – former CM –BS Yeddyurappa