ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ, ದಾಖಲೆ ಪರಿಶೀಲನೆ.

Promotion

ಬೆಂಗಳೂರು,ಫೆಬ್ರವರಿ,10,2023(www.justkannada.in):  ಬಿಡಿಎ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರು ಬಿಗ್ ಶಾಕ್ ನೀಡಿದ್ದು ಬಿಡಿಎ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

ಕಾರ್ನರ್, ಸಿಎ,  ಸೈಟ್ ಹಂಚಿಕೆಯಲ್ಲಿ ಗೋಲ್ ಮಾಲ್ ಆರೋಪ,  ಪರಿಹಾರ ನೀಡುವಲ್ಲೂ ಸಾಕಷ್ಟು ಅವ್ಯವಹಾರದ ಬಗ್ಗೆ ವ್ಯಾಪಕ ದೂರು ಬಂದ ಹಿನ್ನೆಲೆ  ವೈಯಾಲಿಕಾವಲ್ ನಲ್ಲಿರುವ ಬಿಡಿಎ ಕಚೇರಿ ಮೇಲೆ ಲೋಕಾಯುಕ್ತ ಎಸ್ಪಿ ಅಶೋಕ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ಏಕಕಾಲಕ್ಕೆ 6 ತಂಡಗಳ 35 ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು, ಕಚೇರಿ ಒಳಗಿರುವರನ್ನ ಪರಿಶೀಲಿಸಿ ಹೊರಕ್ಕೆ ಬಿಡುತ್ತಿದ್ದಾರೆ. ದಾಳಿ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಗೆ ಸಾರ್ವಜನಿಕರು ದೂರು ನೀಡಿದ್ದಾರೆ ಎನ್ನಲಾಗಿದೆ.

Key words: BDA –office- raided -Lokayukta –officials