ಉಪಚುನಾವಣೆಯಲ್ಲಿ ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ-ಅನರ್ಹ ಶಾಸಕರಿಗೆ ಶಾಕ್ ಕೊಟ್ಟ ಬಿಜೆಪಿ ಶಾಸಕ ಉಮೇಶ್ ಕತ್ತಿ…

Promotion

ಬೆಳಗಾವಿ,ಸೆ,29,2019(www.justkannada.in):  ಉಪ ಚುನಾವಣೆಯಲ್ಲಿ ಅವರ ದಾರಿ ಅವರಿಗೆ, ನಮ್ಮ ದಾರಿ ನಮಗೆ ಎಂದು ಹೇಳುವ ಮೂಲಕ ಅನರ್ಹ ಶಾಸಕರಿಗೆ ಬಿಜೆಪಿ ಶಾಸಕ ಉಮೇಶ್ ಕತ್ತಿ  ಶಾಕ್ ನೀಡಿದ್ದಾರೆ.

ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಇಂದು ಮಾತನಾಡಿ ಬೆಳಗಾವಿ ಜಿಲ್ಲೆಯ ಮೂರು ಕ್ಷೇತ್ರಗಳ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಶಾಸಕ ಉಮೇಶ್ ಕತ್ತಿ,   ಬೈಎಲೆಕ್ಷನ್ ನಲ್ಲಿ ನಮ್ಮ ದಾರಿ ನಮಗೆ ಅವರ ದಾರಿ ಅವರಿಗೆ. ಬೆಳಗಾವಿಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿಯವರಿಗೆ ಟಿಕೆಟ್ ಪಕ್ಕಾ ಎಂದರು.

ಅಥಣಿ ಕ್ಷೇತ್ರದಲ್ಲಿ ಲಕ್ಷ್ಮಣ ಸವದಿ, ಕಾಗವಾಡದಲ್ಲಿ ರಾಜು ಕಾಗೆ, ಗೋಕಾಕ್ ಕ್ಷೇತ್ರದಲ್ಲಿ ಅಶೋಕ್ ಪೂಜಾರಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.  ಉಪಚುನಾವಣೆಯಲ್ಲಿ  ಅಥಣಿ ಕ್ಷೇತ್ರದಲ್ಲಿ ಮಹೇಶ್ ಕುಮಟಳ್ಳಿ, ಕಾಗವಾಡದಲ್ಲಿ ಶ್ರೀಮಂತ ಪಾಟೀಲ್, ಗೋಕಾಕ್ ನಲ್ಲಿ ರಮೇಶ್ ಜಾರಕಿಹೊಳಿ ಸ್ಪರ್ಧೆಗೆ ನಿರ್ಧರಿಸಿದ್ದರು. ಆದರೆ ಈ ಮೂವರು ಅನರ್ಹ ಶಾಸಕರಿಗೆ  ಉಮೇಶ್ ಕತ್ತಿ ಹೇಳಿಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

Key words: belagavi- BJP MLA- Umeshkatti- Shock-disqualified MLA