ಸೂರ್ಯ ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು- ಡಿಸಿಎಂ ಲಕ್ಷ್ಮಣ್ ಸವದಿ ಟಾಂಗ್…

kannada t-shirts

ಬೆಂಗಳೂರು, ನವೆಂಬರ್,18,2020(www.justkannada.in):   ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಹೇಳಿಕೆ ನೀಡುವ ಮೂಲಕ ಕಿಡಿಹೊತ್ತಿಸಿರುವ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಗೆ ಕರ್ನಾಟಕ ಡಿಸಿಎಂ ಲಕ್ಷ್ಮಣ್ ಸವದಿ ತಿರುಗೇಟು ನೀಡಿದ್ದಾರೆ.

ಈ ಹೇಳಿಕೆ ಕುರಿತು ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಸಿಎಂ ಲಕ್ಷ್ಮಣ್ ಸವದಿ, ಸೂರ್ಯಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ್ದು.  ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗವಾಗಿದೆ.  ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆಯನ್ನ ಖಂಡಿಸುತ್ತೇನೆ ಎಂದು ತಿರುಗೇಟು ನೀಡಿದ್ದಾರೆ.belgaum-karnataka-long-sun-moon-dcm-laxman-savadi

ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿದ್ದು ಎಂದು ಹೇಳಿಕೆ ನೀಡಿರುವ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ವಿರುದ್ಧ ರಾಜ್ಯದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ.

Key words: Belgaum – Karnataka – long – sun – moon – DCM- Laxman Savadi

website developers in mysore