ಇದು ಗೌತಮ್ ಅದಾನಿ ಭಾರತವಲ್ಲ: ರೈತರು ಯುವಕರ ಭಾರತ: ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ- ರಾಹುಲ್ ಗಾಂಧಿ ವಾಗ್ದಾಳಿ.

Promotion

ಬೆಳಗಾವಿ,ಮಾರ್ಚ್,20,2023(www.justkannada.in):  ಇದು ಉದ್ಯಮಿ ಅದಾನಿಯ ಭಾರತವಲ್ಲ, ಇದು ರೈತರ, ಯುವಕರ ಭಾರತ. ಕರ್ನಾಟಕದಲ್ಲಿ ಅತ್ಯಂತ ಭ್ರಷ್ಟ ಸರ್ಕಾರವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದರು.

ಬೆಳಗಾವಿಯ ಸಿಪಿಎಡ್​ ಮೈದಾನದಲ್ಲಿ ನಡೆದ ಯುವ ಕ್ರಾಂತಿ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ದೇಶದಲ್ಲಿ ಇಂದು ದ್ವೇಷದ ಭಾವನೆ ಬಿತ್ತಲಾಗುತ್ತಿದೆ. ಕರ್ನಾಟಕ ಸರ್ಕಾರ ಯುವಕರಿಗೆ ಉದ್ಯೋಗ ನೀಡುತ್ತಿಲ್ಲ. ಕರ್ನಾಟಕ ಸರ್ಕಾರ ಭ್ರಷ್ಟಾಚಾರದಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಗುತ್ತಿಗೆದಾರರ ಬಳಿ 40% ಕಮಿಷನ್ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದರೂ ಈವರೆಗೆ ಅವರು ಕ್ರಮ ಕೈಗೊಂಡಿಲ್ಲ ಎಂದು ಗುಡುಗಿದರು.

ಪದವೀಧರ ಪ್ರತಿ ಯುವಕರಿಗೆ ನಾವು 3 ಸಾವಿರ ರೂ. ನಿರುದ್ಯೋಗ ಭತ್ಯೆ ನೀಡಲಿದ್ದೇವೆ. 2 ವರ್ಷಗಳ ಕಾಲ ಪ್ರತಿ ತಿಂಗಳು ಪದವೀಧರ ಯುವಕರಿಗೆ 3 ಸಾವಿರ ರೂ. ನೀಡಲಿದ್ದೇವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಾತ್ರ ಇದು ಸಾಧ್ಯ ಎಂದು  ರಾಹುಲ್ ಗಾಂಧಿ ತಿಳಿಸಿದರು.

ಕರ್ನಾಟಕದ ಮೂಲಕ ಭಾರತ್ ಜೋಡೋ ಯಾತ್ರೆ ಹಾದುಹೋಗಿತ್ತು. ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆಗೆ ಉತ್ತಮ ಸ್ಪಂದನೆ ಸಿಕ್ಕಿದೆ. ಯುವಕರು, ವೃದ್ಧರು ಎಲ್ಲರೂ ಭಾಗಿಯಾಗಿದ್ದರು ಎಂದು ರಾಹುಲ್ ಗಾಂಧಿ ಹೇಳಿದರು.

Key words: belgavi- congress-yuvakranti-Rahul Gandhi