ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ- ಸಂಸದ ಪ್ರತಾಪ್ ಸಿಂಹ.

Promotion

ಮೈಸೂರು,ಏಪ್ರಿಲ್,1,2023(www.justkannada.in):  ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೈವೇ ಟೋಲ್ ದರ ಹೆಚ್ಚಳ ಮಾಡಿದ್ದ ಆದೇಶವನ್ನ NHAI ವಾಪಸ್ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಕುರಿತು ಮಾತನಾಡಿರುವ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ, ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ಹೆದ್ದಾರಿ ಟೋಲ್ ದರ ಹೆಚ್ಚಳ ಇಲ್ಲ. ಟೋಲ್ ದರ ಹೆಚ್ಚಳಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಕಾಮಗಾರಿ ಸಂಪೂರ್ಣವಾಗಿ ಮುಗಿದ ನಂತರ ಹೆಚ್ಚಳ ಮಾಡಲಾಗುತ್ತಿದೆ. ಈಗ ಹಳೆಯ ದರವನ್ನೇ ಮುಂದುವರೆಸಲು ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ಟೋಲ್ ದರ ಹೆಚ್ಚಳಕ್ಕೆ ಸಾರ್ವಜನಿಕರಿಂದ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆ ಟೋಲ್ ದರ ಹೆಚ್ಚಳ ಆದೇಶವನ್ನ ವಾಪಸ್ NHAI ವಾಪಸ್ ಪಡೆದಿದೆ ಎನ್ನಲಾಗಿದೆ.

Key words: Bengaluru-Mysore- highway -toll rate -hike – MP Pratap Simha