ಬೆಂಗಳೂರು: ವಿದ್ಯುತ್ ಶಾಕ್’ನಿಂದ ಅಪಾರ್ಟ್’ಮೆಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಸಾವು

Promotion

ಬೆಂಗಳೂರು, ಫೆಬ್ರವರಿ 05, 2023 (www.justkannada.in): ಬೆಂಗಳೂರಿನ ಕೋಣನಕುಂಟೆ ಬಳಿಯ ಅಪಾರ್ಟ್ ಮೆಂಟ್ ನಲ್ಲಿ ವಿದ್ಯುತ್ ಶಾಕ್ ನಿಂದ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರು ಜಿಲ್ಲೆಯ ಮಧುಗಿರಿ ಮೂಲದ ರಘು ಹಾಗೂ ಅಸ್ಸಾಂ ಮೂಲದ ದಿಲೀಪ್ ಮೃತ ಕಾರ್ಮಿಕರು.

ಕೋಣನಕುಂಟೆ ಬಳಿಯ ಪ್ರೆಸ್ಟೀಜ್ ಗ್ರೂಪ್ ನ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಪ್ರವಹಿಸಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇಬ್ಬರು ಕಾರ್ಮಿಕರು ಅಪಾರ್ಟ್ ಮೆಂಟ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.  ಎಸ್ ಟಿಪಿ ಸಂಪ್ ಬಳಿ ಕೆಲಸ ಮಾಡುತ್ತಿದ್ದರು. ಚರಂಡಿ ಒಳಗೆ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಶಾಕ್ ನಿಂದ ಮೃತಪಟ್ಟಿದ್ದಾರೆ.