ಸಿಎಂ ಬಿಎಸ್ ವೈ ಮತ್ತು ಡಿಕೆಶಿ ವಿರುದ್ದದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ: ವಿಚಾರಣೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಗೆ ಮನವಿ…

Promotion

ನವದೆಹಲಿ,ಡಿ,13,2019(www.justkannada.in):  ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದದ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೆತ್ತಿಕೊಳ್ಳುವಂತೆ ಸುಪ್ರೀಂಕೋರ್ಟ್ ಗೆ ವಕೀಲ ಪ್ರಶಾಂತ್  ಭೂಷಣ್ ಎಂಬುವವರು ಮನವಿ ಮಾಡಿದ್ದಾರೆ.

ಅಂದು ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆನ್ನಿಗಾನಹಳ್ಳಿಯಲ್ಲಿ 4.20 ಎಕರೆ ಭೂಮಿಯನ್ನ ಡಿನೋಟಿಫಿಕೇಷನ್ ಮಾಡಿದ್ದ ಆರೋಪ ಕೇಳಿ ಬಂದಿತ್ತು. ಇದರಿಂದ ಡಿಕೆ ಶಿವಕುಮಾರ್ ಅವರಿಗೆ ಅನುಕೂಲವಾಗಿತ್ತೆನ್ನಲಾಗಿದೆ.  ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಡಿ.ಕೆ ಶಿವಕುಮಾರ್ ವಿರುದ್ದ ಡಿನೋಟಿಫಿಕೇಷನ್ ಆರೋಪ ಕೇಳಿ ಬಂದಿತ್ತು.

ಈ ಸಂಬಂಧ ವಿಚಾರಣೆಯನ್ನ ಕೈಗೆತ್ತುಕೊಳ್ಳುವಂತೆ ವಕೀಲರಾದ ಪ್ರಶಾಂತ್ ಭೂಷಣ್ ಸುಪ್ರೀಂಕೋರ್ಟ್ ನ ಅರುಣ್ ಮಿಶ್ರಾ ನೇತೃತ್ವದ ಪೀಠಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಅರುಣ್ ಮಿಶ್ರಾ ನೇತೃತ್ವದ ಪೀಠ ಚಳಿಗಾಲದ ರಜೆ ಬಳಿಕ ವಿಚಾರಣೆ ನಡೆಸುವುದಾಗಿ ಹೇಳಿದೆ.

Key words: Bennyganahalli denotification- case -against -CM BS yeddyurappa-dk shivakumar-Supreme Court