ಮನೆ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ ಆರು ಮಂದಿ ಸಾವು ಕೇಸ್: ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಿಸಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ..

ಬೀದರ್ ,ಜೂ,27,2019(www.justkannada.in): ಬಸವಕಲ್ಯಾಣದ ಚಿಲ್ಲಾಗಲ್ಲಿಯಲ್ಲಿ ಮಳೆಯಿಂದಾಗಿ  ಮನೆಯ ಮೇಲ್ಚಾವಣಿ ಕುಸಿದು ಒಂದೇ ಕುಟುಂಬದ 6 ಜನರು ಮೃತಪಟ್ಟ  ಮನೆಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಗುರುವಾರ ಭೇಟಿ ನೀಡಿ ಪರಿಹಾರದ 24ಲಕ್ಷ ರೂ. ಚೆಕ್ ವಿತರಿಸಿ ಸಾಂತ್ವಾನ ಹೇಳಿದರು.

ಬಸವ ಕಲ್ಯಾಣದ ಛಿಲ್ಲಾ ಗಲ್ಲಿಯಲ್ಲಿ ನಿನ್ನೆ ಮುಂಜಾನೆ ಮನೆ ಕುಸಿದು ಸೇರಿ ಒಂದೇ ಆರುಮಂದಿ ಸಾವನ್ನಪ್ಪಿದ್ದರು. ಈ ಸಂಬಂಧ ಇಂದು ಮೃತರ ಮನೆಗೆ ಭೇಟಿ ನೀಡಿದ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕುಟುಂಬದ ಮುಖ್ಯಸ್ಥರಾದ ಇಸೂಫ್ ಬಕರೆ ವಾಲೆ ಅವರಿಗೆ ಮುಖ್ಯಮಂತ್ರಿಗಳು 24 ಲಕ್ಷ ರೂ.ಗಳ ಚೆಕ್ಕುಗಳನ್ನು ವಿತರಿಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹೆಚ್.ಡಿಕೆ, ಬೀದರ್ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಸುಮಾರು 100 ವರ್ಷಕ್ಕೂ  ಹಳೆಯದಾದ ಇಂತಹ ನೂರಾರು ಮನೆಗಳು ಇರುವ ಬಗ್ಗೆ  ಮಾಹಿತಿ ದೊರೆತಿದೆ. ಅಂತಹ ಮನೆಗಳ ಸಮೀಕ್ಷೆಯನ್ನು  ನಡೆಸಿ ವರದಿಯನ್ನು ಸಲ್ಲಿಸುವಂತೆ ಈಗಾಗಲೇ ಜಿಲ್ಲಾಧಿಕಾರಿಯವರಿಗೆ ಸೂಚಿಸಿದ್ದೇನೆ. ವಿವಿಧ ವಸತಿ ಯೋಜನೆಗಳ ಅಡಿಯಲ್ಲಿ ಬೀದರ ಜಿಲ್ಲೆಯಲ್ಲಿ ಮನೆಗಳ ನಿರ್ಮಾಣಕ್ಕೆ ಆದ್ಯತೆಯನ್ನು ನೀಡಲಾಗುವುದು. ಬಸವಕಲ್ಯಾಣ ತಾಲೂಕಿನಲ್ಲಿ 2ಸಾವಿರ ಮನೆಗಳ ನಿರ್ಮಾಣಕ್ಕೆ ಆದೇಶಿಸಿದ್ದೇನೆ ಎಂದರು.

ಸಚಿವರಾದ ಬಂಡೆಪ್ಪ ಕಾಶೆಂಪೂರ್, ರಾಜಶೇಖರ ಪಾಟೀಲ್, ರಹೀಂಖಾನ್,  ಶಾಸಕ ಬಿ. ನಾರಾಯಣ ರಾವ್ ಮತ್ತಿತರರು ಉಪಸ್ಥಿತರಿದ್ದರು.

Key words: bidar- death – six people –  CM HD Kumaraswamy –distributed- compensation check