Thursday, September 17, 2026

BDA Apartments

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಜಾಮೀನು ಪ್ರಶ್ನಿಸಿ ಇಡಿ ಸಲ್ಲ...
Home Front Page ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಜಾಮೀನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ...

ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಬಿಗ್ ರಿಲೀಫ್: ಜಾಮೀನು ಪ್ರಶ್ನಿಸಿ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾ…

ನವದೆಹಲಿ,ನ,15,2019(www.justkannada.in):  ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ಪ್ರಶ್ನಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನ ಸುಪ್ರೀಂಕೋರ್ಟ್ ವಜಾಗೊಳಿಸಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ನವದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು.  ಡಿ.ಕೆ ಶಿವಕುಮಾರ್ ಜಾಮೀನು ಪ್ರಶ್ನಿಸಿ ಇಡಿ ಸುಪ್ರೀಂಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿತ್ತು.

ಅರ್ಜಿ ವಿಚಾರಣೆ ನಡೆಸಿದ ನ್ಯಾ.ರೋಹಿಂಗ್ಟನ್ ನಾರಿಮನ್ ನೇತೃತ್ವದ ಪೀಠ ಇಡಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಳಿಸಿದೆ. ನ್ಯಾಯಾಲಯದ ಈ ಆದೇಶದಿಂದ ಶಿವಕುಮಾರ್  ಬಿಗ್ ರಿಲೀಫ್ ಸಿಕ್ಕಂತಾಗಿದೆ.

Key words: Big relief -former minister -DK Sivakumar-supreme court -dismissed – ED – application