ಕೇಂದ್ರ ಸರಕಾರಕ್ಕೆ ಬಿಗ್ ರಿಲೀಫ್: ರಫೇಲ್ ಮರುಪರಿಶೀಲನಾ ಅರ್ಜಿ ವಜಾ ಮಾಡಿದ ಸುಪ್ರೀಂ ಕೋರ್ಟ್

Promotion

ಹೊಸದಿಲ್ಲಿ, ನವೆಂಬರ್ 14, 2019 (www.justkannada.in): ರಫೇಲ್ ಯುದ್ಧ ವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಕೇಂದ್ರ ಸರಕಾರಕ್ಕೆ ನೀಡಿರುವ ಕ್ಲೀನ್ ಚಿಟ್ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಅರ್ಜಿಯ ವಿಚಾರಣೆಯನ್ನು ಮೇ 10ರಂದು ಪೂರ್ಣಗೊಳಿಸಿದ್ದ ಸುಪ್ರೀಂ ಕೋರ್ಟ್ ತೀರ್ಪನ್ನು ಇಂದಿಗೆ ಕಾಯ್ದಿರಿಸಿತ್ತು.

ಕೇಂದ್ರದ ಮಾಜಿ ಸಚಿವರಾದ ಯಶ್ವಂತ್ ಸಿನ್ಹಾ, ಅರುಣ್ ಶೌರಿ ಮತ್ತು ವಕೀಲ ಪ್ರಶಾಂತ್ ಭೂಷಣ್ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಗಳ ಸಂಬಂಧ ತೀರ್ಪು ಅನ್ನು ಮುಖ್ಯ.ನ್ಯಾ ರಂಜನ್ ಗೋಗಯ್ ನೇತೃತ್ವದ ನ್ಯಾ. ಎಸ್‍ಕೆ ಕೌಲ್, ನ್ಯಾ. ಕೆಎಂ ಜೋಸೆಫ್ ಅವರಿದ್ದ ತ್ರಿಸದಸ್ಯ ಪೀಠ ಸುದೀರ್ಘ ವಿಚಾರಣೆ ನಡೆಸಿ ತೀರ್ಪನ್ನು ನೀಡಿದೆ.

2018ರ ನವೆಂಬರ್ 14 ರಂದು ವಿಚಾರಣೆ ಅಂತ್ಯಗೊಳಿಸಿದ್ದ ಸುಪ್ರೀಂಕೋರ್ಟ್ ಡಿಸೆಂಬರ್ 14ರಂದು ತೀರ್ಪು ಪ್ರಕಟಿಸಿ ಎಲ್ಲ ಅರ್ಜಿಗಳನ್ನು ವಜಾಗೊಳಿಸಿತ್ತು.