ಕೆ.ಎಸ್.ಆರ್.ಟಿ.ಸಿ ಬಸ್ ಗೆ ಬೈಕ್ ಡಿಕ್ಕಿ: ಸವಾರ ಸ್ಥಳದಲ್ಲೇ ಸಾವು.

Promotion

ಮೈಸೂರು,ಡಿಸೆಂಬರ್,7,2021(www.justkannada.in):  ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರಿನ ಮಿಲೇನಿಯಮ್ ಸರ್ಕಲ್ ನಲ್ಲಿ ಈ ಘಟನೆ ನಡೆದಿದೆ.  ಬನ್ನಿಮಂಟಪ ಬಸ್ ಡಿಪೋದಿಂದ ಗ್ರಾಮಾಂತರ ಬಸ್ ನಿಲ್ದಾಣದತ್ತ ಹೊರಟ ರಾಜಹಂಸ ಬಸ್ ಗೆ ಬೈಕ್ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.nice road-Car overturn-driver-death 

ಸ್ಥಳಕ್ಕೆ ಎನ್.ಆರ್.ಸಂಚಾರಿ ಪೊಲೀಸರು ಹಾಗೂ ಎನ್.ಆರ್.ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತನ ವಿವರ ತಿಳಿದು ಬಂದಿಲ್ಲ.

Key words: Bike-collision –KSRTC-bus-rider-died -on the spot.