ನಿಯಂತ್ರಣ ತಪ್ಪಿ ಮರಕ್ಕೆ ಬೈಕ್ ಡಿಕ್ಕಿ: ಯುವಕ ಮತ್ತು ಯುವತಿ ಸಾವು.

Promotion

ಬೆಂಗಳೂರು,ಜೂನ್,3,2022(www.justkannada.in): ನಿಯಂತ್ರಣ ತಪ್ಪಿ ಮರಕ್ಕೆ ಡುಕಾಟಿ ಬೈಕ್​ ಡಿಕ್ಕಿ ಹೊಡೆದು ಯುವಕ ಮತ್ತು ಯುವತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರು ಹೊರವಲಯ ಸರ್ಜಾಪುರದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಮಾರತಹಳ್ಳಿ ಮೂಲದ ಗಗನ್ ದೀಪ್(26) ಮತ್ತು ಬನಶಂಕರಿಯ ಯಶಸ್ವಿನಿ(23) ಮೃತಪಟ್ಟವರು ಎಂದು ಗುರುತಿಸಲಾಗಿದೆ.tractor-collision-bike-bike-rider-dies-on-the-spot-mysore

ಸರ್ಜಾಪುರದ ಪ್ರೆಸ್ಟೀಜ್ ಕಂಪನಿಯಲ್ಲಿ ಇವರಿಬ್ಬರೂ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಬೆಂಗಳೂರಿನಿಂದ ಸರ್ಜಾಪುರಕ್ಕೆ ಬೈಕ್​ನಲ್ಲಿ ಬರುತ್ತಿದ್ದರು. ಈ ವೇಳೆ ರಸ್ತೆ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್  ಮರಕ್ಕೆ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹಗಳನ್ನು ಆಕ್ಸ್​ಫರ್ಡ್​ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

Key words: bike -crashed – tree-two-Death-bangalore