ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.

ಬೆಂಗಳೂರು,ಜನವರಿ,18,2023(www.justkannada.in):  ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.

ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ.  ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ.

ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್​ ನ್ನು ವಶಕ್ಕೆ ಪಡೆದಿದ್ದಾರೆ.

Key words: Bike rider -dies – hit – BMTC bus