ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ….

ಬೆಂಗಳೂರು, ಫೆ,3,2020(www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ  ಬಿಸಿಯೂಟ ಕಾರ್ಯಕರ್ತೆಯರು ಬೆಂಗಳೂರಲ್ಲಿ ಮತ್ತೆ ಪ್ರತಿಭಟನೆ ಆರಂಭಿಸಿದ್ದಾರೆ.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪ್ರತಿಭಟನೆ ಆರಂಭಿಸಿದ್ದು ಪ್ರತಿಭಟನೆ ಪಾಲ್ಗೊಳ್ಳಲು ಸುಂಆರು ನಾಲ್ಕುಸಾವಿರ ಕಾರ್ಯಕರ್ತೆಯರು ಆಗಮಿಸಿದ್ದಾರೆ.  ಪ್ರತಿಭಟನೆಗೆ ಅನುಮತಿ ಇಲ್ಲದಿದ್ದರೂ ಪ್ರತಿಭಟನೆ ಆರಂಭಿಸಿರುವುದಕ್ಕಾಗಿ ಸಿಐಟಿಯು ಪ್ರಧಾನ ಕಾರ್ಯದರ್ಶಿ ವರಲಕ್ಷ್ಮೀ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವುದೇ ಕಾರಣಕ್ಕೂ ಪ್ರತಿಭಟನೆ ಹಿಂತೆದುಕೊಳ್ಳಬಾರದು ಎಂದು ನಿರ್ಧರಸಿದ್ದಾರೆ.

ಬಿಸಿಯೂಟ ನೌಕರರಿಗೆ ಕನಿಷ್ಠ ವೇತನ ಜಾರಿ, ಈ ನೌಕರರನ್ನು ಡಿ ಗ್ರೂಪ್ ನೌಕರರೆಂದು ಪರಿಗಣಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಹೋರಾಟ  ನಡೆಸುತ್ತಿದ್ದಾರೆ.  ಪ್ರತಿಭಟನಾಕಾರರನ್ನ ಪೊಲೀಸರು ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲೇ ತಡೆದಿದ್ದಾರೆ.

ಬಿಸಿಯೂಟ ಕಾರ್ಯಕರ್ತೆಯರ ಪ್ರತಿಭಟನೆ ಹಿನ್ನೆಲೆ ಭದ್ರತೆಗಾಗಿ . ಓರ್ವ ಡಿಸಿಪಿ ಇಬ್ಬರು ಎಸಿಪಿ. 12 ಪಿಎಸ್ ಐ ಸೇರಿ  500 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ.

Key words: bisiyuta activists- protest – Bangalore- various- demands